ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ (ಕೆಐಎಡಿಬಿ)ಗೆ ಕೃಷಿ ಭೂಮಿ ಸ್ವಾಧೀನ ವಿರೋಧಿಸಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ರೈತರು ನಡೆಸುತ್ತಿರುವ ಹೋರಾಟ 520ನೇ ದಿನ ಪೂರೈಸಿದ್ದು, ಇಂದು ಧರಣಿ ಸ್ಥಳಕ್ಕೆ ಉತ್ತರ ಭಾರತ ರೈತ ಹೋರಾಟಗಾರರು ಆಗಮಿಸಿ ಬೆಂಬಲ ಸೂಚಿಸಿದರು.
ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆದ ರೈತ ಹೋರಾಟದ ಮುಂದಾಳತ್ವ ವಹಿಸಿದ್ದ ರಾಕೇಶ್ ಟಿಕಾಯತ್ ಮತ್ತು ಯದುವೀರ್ ಸಿಂಗ್ ಅವರು ದೇವನಹಳ್ಳಿ ಚನ್ನರಾಯಪಟ್ಟಣ ಗ್ರಾಮದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ್ದಾರೆ.
ಇದನ್ನೂ ಓದಿ; ‘ಹುಚ್ಚ ಕೂಡಾ ಪ್ರಕಾಶ್ ರಾಜ್‌ಗಿಂತ ಉತ್ತಮವಾಗಿ ಮಾತಾಡ್ತಾನೆ’
ರೈತರ ಕೃಷಿ ಭೂಮಿ ಸ್ವಾಧೀನ ಕೈಬಿಡುವಂತೆ ಕಳೆದ 520 ದಿನಗಳಿಂದ ರೈತರು ನಿರಂತರವಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಹೀಗಾಗಿ, ಧರಣಿ ಸ್ಥಳಕ್ಕೆ ತೆರಳಿ ರೈತರನ್ನ ಭೇಟಿಯಾಗಿದ್ದಲ್ಲದೆ, ಅನ್ನದಾತರ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.
ಪಂಜಾಬ್ ಮತ್ತು ದೆಹಲಿಯಿಂದ ರಾಜ್ಯಕ್ಕೆ ಆಗಮಿಸಿರುವ 15 ಜನ ರೈತ ಹೋರಾಟಗಾರರು, ಸ್ಥಳೀಯ ರೈತರ ಜೊತೆಗೂಡಿ ಚನ್ನರಾಯಪಟ್ಟಣದಲ್ಲಿ ನಡೆಯುತ್ತಿರುವ ‘ರೈತ ಚೈತನ್ಯ’ ಸಮಾವೇಶದಲ್ಲಿ ಭಾಗಿಯಾದರು. ಸಮಾವೇಶದ ಮೂಲಕ ಎರಡನೇ ಹಂತದ ಭೂಸ್ವಾಧೀನ ಕೈಬಿಡುವಂತೆ ಒತ್ತಾಯಿಸಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.