Sunday, March 26, 2023
spot_img
- Advertisement -spot_img

ಗ್ರಾಮೀಣ ಭಾಗದ ಅಭಿವೃದ್ದಿಯಾದರೆ ದೇಶದ ಅಭಿವೃದ್ದಿ ಸಾಧ್ಯ : ಮಾಜಿ ಸಿಎಂ ಸಿದ್ದರಾಮಯ್ಯ

ಸುತ್ತೂರು: ಗ್ರಾಮೀಣ ಭಾಗದ ಅಭಿವೃದ್ದಿಯಾದರೆ ದೇಶದ ಅಭಿವೃದ್ದಿ ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವರುಣಾ ಕ್ಷೇತ್ರಕ್ಕೆ ಸೇರುವ ಸುತ್ತೂರು ಗ್ರಾಮದಲ್ಲಿ ಸಾರ್ವಜನಿಕ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಮುಂಬರುವ 2023ರ ವಿಧಾನ ಸಭಾ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಅಭಿವೃದ್ದಿ ಮಾಡುವುದಾಗಿ ತಿಳಿಸಿದರು.

ಗ್ರಾಮಗಳ ಸಮಗ್ರ ಅಭಿವೃದ್ದಿಯಾದರೆ ಗ್ರಾಮೀಣರ ಬದುಕು ಹಸನಾಗುತ್ತದೆ, ಶಿಕ್ಷಣ, ಆರೋಗ್ಯ, ಹಾಗೂ ಕೃಷಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಪ್ರಗತಿಯನ್ನು ಸಾಧಿಸಿದರೆ ಆರ್ಥಿಕವಾಗಿ ಮುಂದೆ ಬರಲು ಅನುಕೂಲವಾಗುತ್ತದೆ, ಆದ್ದರಿಂದ ಮುಂದಿನ ಚುನಾವಣೆಯಲ್ಲಿ ನಮ್ಮ ಸರ್ಕಾರ ಬಂದರೆ ಗ್ರಾಮೀಣಾಭಿವೃದ್ದಿಗೆ ಹೆಚ್ಚಿನ ಒತ್ತು ನೀಡುತ್ತೇನೆ ಎಂದು ತಿಳಿಸಿದರು.

ಗ್ರಾಮೀಣ ಭಾಗದಲ್ಲಿ ಜನರು ಆರೋಗ್ಯವಂತರಾಗಿದ್ದರೆ ಎಲ್ಲಾ ಕಾರ್ಯ ಚಟುವಟಿಕೆಗಳಿಗೂ ಭಾಗವಹಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಸರ್ಕಾರದಿಂದ ಸಿಗುವಂತಹ ಆರೋಗ್ಯ ಸಂಬಂಧಪಟ್ಟ ಎಲ್ಲ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

Related Articles

- Advertisement -

Latest Articles