ಬೆಂಗಳೂರು: ಮಾಜಿ ಸಂಸದ ಧ್ರುವನಾರಾಯಣ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಧ್ರುವನಾರಾಯಣ್ ಅಗಲಿಕೆಗೆ ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ. ಬಿಜೆಪಿ ನಾಯಕ BJP ನಾಯಕ ಪ್ರತಾಪ್ ಸಿಂಹ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿ ಸಂತಾಪ ಸೂಚಿಸಿದ್ದಾರೆ..” ಇಂಥಾ ಒಳ್ಳೆಯ ವ್ಯಕ್ತಿಯನ್ನೂ ಕಿತ್ತುಕೊಂಡೆಯಲ್ಲಾ ದೇವರೇ… ಓಂ ಶಾಂತಿ” ಎಂದು ಬರೆದುಕೊಂಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಧ್ರುವ ನಾರಾಯಣ್ ಇನ್ನಿಲ್ಲ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಕಣ್ಣೀರಿಟ್ಟಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ನನ್ನ ಕಾರ್ಯಾಧ್ಯಕ್ಷ ಅಲ್ಲ. ನನ್ನ ಕುಟುಂಬವಾಗಿದ್ದರು ಘಟನೆ ಬಗ್ಗೆ ನಮ್ಮ ಡಾಕ್ಟರ್ ಮಾಹಿತಿ ನೀಡಿದರು. ಧ್ರುವನಾರಾಯಣ್ ಅವರಿಗೆ ರಕ್ತದ ವಾಂತಿ ಆಗಿದೆ. ಆಮೇಲೆ ಉಸಿರಾಟ ಸಮಸ್ಯೆ ಆಗಿದೆ ಅಂತಾ ಹೇಳಿದ್ರು. ಧ್ರುವ ನಾರಾಯಣ್ ನಿಧನದಿಂದ ಇಡೀ ಕಾಂಗ್ರೆಸ್ ಕುಟುಂಬಕ್ಕೆ ನಷ್ಟ ಆಗಿದೆ. ಸಂಭಾವಿ ರಾಜಕಾರಣಿ, ನಮಗೆ ದೊಡ್ಡ ಶಕ್ತಿ ಆಗಿದ್ದರು. ನಮ್ಮ ಪಕ್ಷ ಕಾರ್ಯಕರ್ತರಿಗೆ ದೊಡ್ಡ ಆಸ್ತಿ ಆಗಿದ್ದರು ಎಂದು ಮಾಧ್ಯಮದವರೊಂದಿಗೆ ಹಂಚಿಕೊಂಡಿದ್ದಾರೆ.
ಇನ್ನೂ , ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಜಿ.ಟಿ.ದೇವೇಗೌಡ, ಸತೀಶ್ ಜಾರಕಿಹೊಳಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.