ತುಮಕೂರು: ಉಪಾ ಚುನಾವಣೆ ಯಲ್ಲಿ ಗೆದ್ದು ಇತಿಹಾಸ ಸೃಷ್ಟಿಸಿದ ಶಿರಾ ಕ್ಷೇತ್ರದಲ್ಲಿ ಜನ ಸಂಕಲ್ಪಯಾತ್ರೆ ನಡೆಸಿ ಇನ್ನಷ್ಟು ಭದ್ರಗೊಳಿಸಲು ಸಜ್ಜಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ತುಮಕೂರು ಜಿಲ್ಲೆಯಲ್ಲಿ ಎರಡನೇ ಸುತ್ತಿನ ಮತ ಪ್ರಚಾರ ನಡೆಸಲಿದ್ದಾರೆ.ಪಾವಗಡ, ಕೊರಟಗೆರೆ, ಮಧುಗಿರಿ ಭಾಗದಲ್ಲಿ ಬಿಜೆಪಿಗೆ ನೆಲೆಯೇ ಇಲ್ಲ. ಹಾಗಾಗಿ ಈ ಭಾಗದಲ್ಲಿ ಪಕ್ಷ ಬಲಗೊಳಿಸಲು ಸಜ್ಜಾದ ಬಿಜೆಪಿ ಶಿರಾದಲ್ಲಿ ಬೃಹತ್ ಸಂಕಲ್ಪ ಯಾತ್ರೆ ನಡೆಸುತ್ತಿದೆ.
ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ನಿನ್ನೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದರು. ಇದಕ್ಕೂ ಮುನ್ನಾ ತುಮಕೂರು-ಮದುಗಿರಿ ಉಪವಿಭಾಗದ ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮನೆ ಮನೆಗೆ ತೆರಳಿ ಬಿಜೆಪಿಯ ಅಭಿವೃದ್ದಿ ಕಾರ್ಯಗಳನ್ನ ಮಾತೆಯರಿಗೆ ತಿಳಿಸಿ ಪಕ್ಷ ಬಲಪಡಿಸುವ ಮೂಲಕ ಜಿಲ್ಲೆಯಲ್ಲಿ 11ವಿಧಾನ ಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವಂತೆ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯಾಧ್ಯಕ್ಷ ಕಟೀಲ್ ಸಿಎಂ ಬೊಮ್ಮಾಯಿ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಘಟಾನುಘಟಿ ನಾಯಕರು ದಂಡೇ ಉಪಸ್ಥಿತಿ ಇರಲಿದೆ. ಜನ ಸಂಕಲ್ಪಯಾತ್ರೆ ಹಿನ್ನೆಲೆಯಲ್ಲಿ ಶಿರಾ ನಗರ ಸಂಪೂರ್ಣ ಕೇಸರಿಮಯವಾಗಿದೆ. ಶಾಸಕ ರಾಜೇಶ್ ಗೌಡರ ಉಸ್ತುವಾರಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.