ಹುಬ್ಬಳ್ಳಿ : ಕುಕ್ಕರ್ ಬ್ಲಾಸ್ಟ್ ವಿಚಾರದಲ್ಲಿ ನನ್ನ ಬಗ್ಗೆ ಯಾರು ಬೇಕಾದ್ರೂ, ಏನಾದ್ರು ಪ್ರಚಾರ ಮಾಡ್ಲಿ. ಕಾಂಗ್ರೆಸ್ ಭಯೋತ್ಪಾದನೆಯನ್ನು ವಿರೋಧಿಸುತ್ತಾ ಬಂದಿರುವ ಪಕ್ಷ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿ,ಅಧಿಕಾರದಲ್ಲಿ ಇದ್ದಾಗೆಲ್ಲಾ ದೇಶದಲ್ಲಿ ಭಯೋತ್ಪಾದನೆ ದಮನ ಮಾಡಿದ್ದೇವೆ. ಭಯೋತ್ಪಾದನೆ ನಿಯಂತ್ರಿಸಲಾಗದ ಸರ್ಕಾರ ವಜಾ ಮಾಡಿದ್ದೇವೆ. ಮಂಗಳೂರು ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದೀವಿ. ಯುವಕನಿಗೆ ಪ್ರಜ್ಞೆ ಬರೋವರೆಗೆ ಏನೂ ಹೇಳಕ್ಕೆ ಆಗಲ್ಲಾ ಅಂತಾ ಪೊಲೀಸ್ ಕಮೀಷನರ್ ಹೇಳಿದ್ರು. ಸಚಿವ ಆರ್. ಅಶೋಕ್ ನನಗೆ ಅಮಾಯಕನ ಅವಾರ್ಡ್ ಕೊಡುವುದಾಗಿ ಹೇಳಿದ್ದಾರೆ.
ಅಮಾಯಕ ಅವಾರ್ಡ್ ತೆಗೆದುಕೊಳ್ಳಲು ನಾನು ಸಿದ್ಧನಿದ್ದೇನೆ. ಅಶೋಕ್ ಡೇಟ್, ಟೈಮ್ ಫಿಕ್ಸ್ ಮಾಡಲಿ ಎಂದು ಸವಾಲು ಹಾಕಿದ್ದಾರೆ.ಸಿದ್ದರಾಮಯ್ಯ ಬಸ್ ಯಾತ್ರೆಗೆ ಕಂಡೀಷನ್ ಹಾಕಿದ್ದಾರೆ ಅನ್ನೋ ಪ್ರಶ್ನೆಗೆ ಪ್ರತಿಕ್ರಿಯಿಸಿ, ಬಸ್‍ನಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಯಾತ್ರೆ ಪ್ರಾರಂಭವಾಗುತ್ತೆ.
ಮಹದಾಯಿ ವಿಚಾರದಲ್ಲಿ ಜನವರಿ 2 ರಂದು ಹುಬ್ಬಳ್ಳಿಯಲ್ಲಿ ಹೋರಾಟ ಸಮಾವೇಶ ಮಾಡುತ್ತೇವೆ. ಯಾರೂ ಕಂಡೀಷನ್ ಹಾಕಲ್ಲ. ಪಕ್ಷದ ತೀರ್ಮಾನವೇ ಅಂತಿಮ ಎಂದರು.