Tuesday, November 28, 2023
spot_img
- Advertisement -spot_img

ಡಿ.ಕೆ.ಶಿವಕುಮಾರ್ ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದಲ್ಲಿ ಸ್ಪರ್ಧಿಸ್ತಾರಾ ?

ಬೆಂಗಳೂರು : ಡಿ.ಕೆ.ಶಿವಕುಮಾರ್ ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಒಂದು ಲೆಕ್ಕಾಚಾರ ಮಾಡುತ್ತಿದ್ದಾರೆ ಅನ್ನೋ ಮಾತು ಕೇಳಿ ಬರುತ್ತಿದೆ.

ಡಿಕೆ ಸಹ ಎರಡು ಮೂರು ದಿನಗಳ ನಂತರ ನಿರ್ಧಾರ ಹೇಳ್ತೀನಿ ಎಂದು ಹೇಳಿದ್ದಾರೆ. ಕಳೆದ ಚುನಾವಣೆಯಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗ್ತಾರೆ ಎಂದು ಒಕ್ಕಲಿಗ ಸಮೂದಾಯ ಮಂಡ್ಯ ಜಿಲ್ಲೆಯ 7 ಕ್ಷೇತ್ರದ ಅಭ್ಯರ್ಥಿಗಳನ್ನು ಗೆಲ್ಲಿಸಿದ್ರು. ಇದೀಗ ಡಿಕೆಶಿ ಸಹ ಅದೇ ಹಾದಿಯಲ್ಲಿ ಹೊರಟಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪೂರಕ ಎಂಬಂತೆ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಗುರುಚರಣ್ ಹಾಗೂ ಕಾಂಗ್ರೆಸ್‍ನ ನಾಯಕರು ಡಿಕೆಶಿ ಅವರಿಗೆ ಮದ್ದೂರಿನಲ್ಲಿ ಸ್ಪರ್ಧೆ ಮಾಡುವಂತೆ ಆಹ್ವಾನ ನೀಡಿದ್ದಾರೆ.

ಸುಮಲತಾ ಅಂಬರೀಶ್ ಎಂಎಲ್‍ಎ ಚುನಾವಣೆಯ ಸ್ಪರ್ಧೆಯನ್ನು ತಳ್ಳಿ ಹಾಕುತ್ತಿಲ್ಲ. ನಾನು ಎಂಪಿಯಾಗಿ ಬರಬೇಕು ಅಂದುಕೊಂಡಿರಲಿಲ್ಲ, ಅದೇ ರೀತಿ ಮುಂದೆ ಸಂದರ್ಭಕ್ಕೆ ಅನುಗುಣವಾಗಿ ನಾನು ತೀರ್ಮಾನ ಮಾಡುತ್ತೇನೆ ಎಂದು ಸುಮಲತಾ ಹೇಳಿದ್ದಾರೆ. ನಾಗಮಂಗಲ ಕ್ಷೇತ್ರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಾಭಿಮಾನಿ ಪರ್ವ ಕಾರ್ಯಕ್ರಮ ನಡೆಸಿ ಜನರಿಗೆ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡ್ತಾ ಇದೀನಿ ನನ್ನ ಬೆಂಬಲಿಸಿ ಎಂದು ಜನರಲ್ಲಿ ಕೇಳಿಕೊಳ್ಳುತ್ತಾ ಇದ್ದಾರೆ. ಈ ನಡುವೆ ಶಿವರಾಮೇಗೌಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ರನ್ನು ಭೇಟಿಯಾಗಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ ಶಿವರಾಮೇಗೌಡ ಕಾಂಗ್ರೆಸ್‍ನಿಂದ ನಾಗಮಂಗಲ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂದು ಮಂಡ್ಯ ರಾಜಕೀಯದಲ್ಲಿ ಓಡಾಡುತ್ತಿದೆ.

Related Articles

- Advertisement -spot_img

Latest Articles