ಮೈಸೂರು: ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಸೀರೆ, ಸೈಕಲ್ ಬಿಟ್ಟರೆ ಬೇರೆ ಏನು ಕೊಡಲಿಲ್ಲ ಅಂತಾ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಇನ್ನು ಕೇವಲ 50 ದಿನಗಳ ಕಾಲ ಮಾತ್ರ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇರುತ್ತದೆ , ಮುಂದಿನ ಎಲೆಕ್ಷನ್ ನಲ್ಲಿ ನಮ್ಮ ಗೆಲುವು ಖಚಿತ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ್ರೆ ಎಲ್ಲ ಬೇಡಿಕೆ ಈಡೇರಿಸ್ತೇವೆ ಎಂದು ಭರವಸೆ ನೀಡಿದರು.
ಯತೀಂದ್ರ ಸಿದ್ದರಾಮಯ್ಯ ನಿಮ್ಮ ಶಾಸಕರಾಗಿರುವುದು ಭಾಗ್ಯ. ಸಿದ್ದರಾಮಯ್ಯ ಅವರಿಗೆ ಎಲ್ಲಿ ಬೇಕಾದರೂ ಚುನಾವಣೆಗೆ ನಿಂತುಕೊಳ್ಳುವ ಶಕ್ತಿ ನೀಡಿದ್ದೀರಿ. ವರುಣಾ ಕ್ಷೇತ್ರದ ಜನರ ಸಹಾಯ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಗ ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್ ನೀಡುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ವರುಣಾ ಕ್ಷೇತ್ರದಿಂದ ಸದ್ಯ ಯತೀಂದ್ರ ಒಬ್ಬರೇ ಅರ್ಜಿ ಹಾಕಿದ್ದಾರೆ. ಈ ಬಾರಿ ವರುಣಾದಲ್ಲಿ ಯತೀಂದ್ರ ಅವರನ್ನು ಹೆಚ್ಚು ಮತ ನೀಡಿ ಗೆಲ್ಲಿಸಿ ಎಂದು ಡಿಕೆಶಿ ಮತದಾರರಲ್ಲಿ ಮನವಿ ಮಾಡಿದ್ದಾರೆ.
50 ದಿನಗಳ ಬಳಿಕ ನಿಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದಾರೆ.ನನಗೂ ಒಂದು ಅವಕಾಶ ಕೊಡಿ, ನಿಮ್ಮ ಸೇವೆ ಮಾಡೋಕೆ ನಾನು ಸಿದ್ದ ಎಂದು ಹೇಳುವ ಮೂಲಕ ಸಿಎಂ ಆಗುವ ಇಂಗಿತವನ್ನು ಡಿಕೆಶಿ ಹಲವು ಬಾರಿ ವ್ಯಕ್ತಪಡಿಸಿದ್ದಾರೆ. ಕೈ ಪಕ್ಷ ಅಧಿಕಾರಕ್ಕೆ ಬಂದರೆ ಮೂರನೇ ಮಹಡಿಗೆ ಬಂದು ನನ್ನನ್ನು ಭೇಟಿಯಾಗಬೇಕು ಎಂದು ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ ಎಂದು ಹೇಳಿದ್ದರು.