ಬೆಂಗಳೂರು: ನಾನು ನಿಮಾನ್ಸ್ ಅಭ್ಯರ್ಥಿಗಳ ಬಗ್ಗೆ ಮಾತನಾಡುವುದಕ್ಕೆ ಹೋಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಹೀನಾಯ ಸ್ಥಿತಿಯಲ್ಲಿದ್ದು, ನಮ್ಮ ಕೆಲವು ಮಂತ್ರಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆದರಿಸುತ್ತಿದ್ದಾರೆ. ಬಾಂಬೆಯಿಂದ ಬಂದವರಿಗೆ ಸಿಡಿ ಬಿಡುತ್ತೇನೆ ನೋಡು ಬಾ ಎಂದು ಬೆದರಿಕೆ ಹಾಕುತ್ತಿದ್ದಾರೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದರು.
ಮೆಂಟಲ್ ಹಾಸ್ಪಿಟಲ್ ಕ್ಯಾಂಡಿಡೇಟ್ ಬಗ್ಗೆ ನಾನು ಮಾತನಾಡಲು ಹೋಗಲ್ಲ. ಅವರ ಪಾರ್ಟಿಯಲ್ಲಿ ಏನೇನು ಇದೆಯೋ ಗೊತ್ತಿಲ್ಲ ಎಂದರು. ಡಿಕೆಶಿವಕುಮಾರ್ ಅವರ ಕೈಗೆ ರಾಜ್ಯ ಸಿಕ್ಕರೆ ಟೋಲ್ ಎಂಬ ಮತ್ತೊಂದು ಟೋಲ್ ಹಾಕುತ್ತಾರೆ ಎಂಬ ಆರೋಪಕ್ಕೆ ಉತ್ತರಿಸಿ ಮೊದಲು ಬೆಂಗಳೂರು- ಮೈಸೂರು ರೋಡ್‍ನ ಟೋಲ್ ವ್ಯವಸ್ಥೆ ಮೊದಲು ಸರಿಪಡಿಸಲಿ, ಉಳಿದ ವಿಚಾರ ಆಮೇಲೆ ಮಾತಾಡೋಣ ಎಂದು ಕಿಡಿಕಾರಿದರು.
ಕಳೆದ 2 ವರ್ಷಗಳಿಂದ ಮಹಾನಾಯಕ ಸಿಡಿ ಇಟ್ಟುಕೊಂಡು ಕುಳಿತಿದ್ದಾನೆ. ಅದು ನಿಜ ಆಗಿದ್ದರೆ ಆಗಲೇ ಬಿಡುಗಡೆ ಮಾಡಬೇಕಿತ್ತು. ಈಗ ಎಲೆಕ್ಷನ್ ಸಂದರ್ಭದಲ್ಲಿ ಏಕೆ? ಲಿಂಗಾಯತ, ಮುಸ್ಲಿಂ, ಎಸ್‌ಸಿ ಸಮುದಾಯದವರನ್ನು ಎತ್ತಿಕಟ್ಟಲು ಕುತಂತ್ರ ಮಾಡುತ್ತಿದ್ದಾನೆ. ಡಿಕೆಶಿ ಉದ್ದೇಶ ಅದೇ, ಅವನಿಗೆ ಬೇರೆ ದಾರಿಯೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದರು.