Saturday, June 10, 2023
spot_img
- Advertisement -spot_img

ಡಿಸಿಎಂ ಪೋಸ್ಟ್‌ಗೆ ಒಪ್ಪದ ಡಿ.ಕೆ.ಶಿವಕುಮಾರ್ !

ಬೆಂಗಳೂರು: ಕರ್ನಾಟಕ ಹೊಸ ಸಿಎಂ ಆಯ್ಕೆಯಾಯಿತು ಅನ್ನೋವಾಗಲೇ ಡಿ.ಕೆ.ಶಿವಕುಮಾರ್ ಡಿಸಿಎಂ ಪೋಸ್ಟಿಗೆ ಒಪ್ಪುತ್ತಿಲ್ಲ ಅಂತಾ ತಿಳಿದುಬಂದಿದೆ.

ಸಭೆ ಮುಗಿಸಿ ಸೋನಿಯಾ ನಿವಾಸದಿಂದ ರಾಹುಲ್ ಗಾಂಧಿ ಜೊತೆಗೆ ಮಾತುಕತೆ ನಡೆಸಿ ತುಂಬಾ ಕೋಪದಿಂದಲೇ ಡಿಕೆಶಿ ಹೊರಬಂದಿದ್ದಾರೆ. ಹೈಕಮಾಂಡ್ ಪ್ರಸ್ತಾಪ ಒಪ್ಪಲು ಹಿಂದೇಟು ಹಾಕಿದ್ದು, ಡಿಕೆಶಿ ಮುಂದಿನ ನಡೆ ಬಗ್ಗೆ ತೀವ್ರ ಕುತೂಹಲ ಹೆಚ್ಚಿದೆ. ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿವಾಸದಲ್ಲಿ ಡಿಕೆ ಶಿವಕುಮಾರ್ ಮಾತುಕತೆ ನಡೆಸುತ್ತಿದ್ದಾರೆ. ಕೊಟ್ರೆ ಸಿಎಂ ಹುದ್ದೆ ಕೊಡಿ, ಬೇರೆ ಹುದ್ದೆ ಬೇಡವೇ ಬೇಡ ಎಂದು ಪಟ್ಟು ಹಿಡಿದಿದ್ದಾರೆ.

ಇತ್ತ ಡಿಕೆ ಶಿವಕುಮಾರ್ ಮೇಲೆ ಸಿಬಿಐ ಕೇಸ್‌ಗಳು ವಿಚಾರಣೆ ನಡೆಯುತ್ತಿದೆ. ಇದೀಗ ಸಿಎಂ ಹುದ್ದೆ ಡಿಕೆ ಶಿವಕುಮಾರ್‌ಗೆ ನೀಡಿದರೆ, ಬಿಜೆಪಿಗೆ ಮತ್ತೊಂದು ಅಸ್ತ್ರ ಸಿಗಲಿದೆ ಎಂದು ಸಿದ್ದರಾಮಯ್ಯ ತಮ್ಮ ವಾದ ಮಂಡಿಸಿದ್ದಾರೆ ಎಂದು ಮೂಲಗಳು ಹೇಳಿವೆ. ಇನ್ನೂ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಾಳೆ ಮಧ್ಯಾಹ್ನ 3:30ಕ್ಕೆ ಸಿದ್ದರಾಮಯ್ಯ ಮತ್ತು ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಿಗದಿಯಾದ ಬೆನ್ನಲ್ಲೇ ಅಧಿಕಾರಿಗಳು ಸಿದ್ಧತೆಗಾಗಿ ಕಂಠೀರವ ಸ್ಟೇಡಿಯಂಗೆ ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.ಕಾರ್ಯಕ್ರಮದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು, ಅಭಿಮಾನಿಗಳ ಮುಂದೆ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.

Related Articles

- Advertisement -spot_img

Latest Articles