ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಇದ್ದ ವ್ಯವಸ್ಥೆ ನಮಗೆ ಬೇಕಾಗಿಲ್ಲ, ನಮ್ಮ ಸರ್ಕಾರದಲ್ಲಿ ಎಲ್ಲರಿಗೂ ಒಂದೇ ಕಾನೂನು. ಎಷ್ಟೆ ದೊಡ್ಡವರಾದ್ರೂ ಕಾನೂನು ಪಾಲನೆ ಮಾಡಬೇಕು, ರೌಡಿಸಂ ಚಟುವಟಿಕೆಗಳ ಬಗ್ಗೆ ಹೆಚ್ಚಿನ ನಿಗಾ ಇಡಬೇಕು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಡಿಕೆಶಿ ಅಸಾಮಾಧನ ವ್ಯಕ್ತಪಡಿಸಿದರು.
ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ಹೊರಟಿದ್ದೀರಾ ಎಂದು ಡಿಕೆ ಶಿ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಉಲ್ಲಂಘಟನೆ, ರೌಡಿಸಂ ಚಟುವಟಿಕೆಗಳು ನಡೆದರೆ, ಆಯಾ ವ್ಯಾಪ್ತಿಯ ಡಿಸಿಪಿ, ಎಸ್‌ಪಿಗಳನ್ನು ಹೊಣೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಅಕ್ರಮವಾಗಿ ನಡೆಯುವ ನೈಟ್ ಕ್ಲಬ್, ಡ್ರಗ್ಸ್, ಅಕ್ರಮ ಚಟುವಟಿಕೆಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ವಹಿಸಿ, ಡ್ರಗ್ಸ್ ಮಾಫಿಯಾ ವಿರುದ್ಧ ಹೆಚ್ಚಿನ ಗಮನ ಕೊಡಿ, ಅಂತಹ ಕ್ರಿಮಿನಲ್‌ಗಳ ವಿರುದ್ಧ ಹೆಚ್ಚಿನ ನಿಗಾ ಇಡಿ ಎಂದು ಸೂಚಿಸಿದ್ದಾರೆ. ಇನ್ನು ಕಳೆದ ಸರ್ಕಾರದಂತೆ ನಮ್ಮ ಸರ್ಕಾರದ ಅವಧಿಯಲ್ಲಿ ಪೊಲೀಸ್ ಇಲಾಖೆ ಕೇಸರೀಕರಣ ಮಾಡಲು ನಾವು ಅವಕಾಶ ಕೊಡಲ್ಲ ಎಂದು ಖಡಕ್ಕಾಗಿ ಹೇಳಿದರು.