Monday, March 27, 2023
spot_img
- Advertisement -spot_img

ಬೊಮ್ಮಾಯಿಯವರನ್ನು ನಾಯಿ ಮರಿಗೆ ಹೋಲಿಸಿ ಮಾತನಾಡಿದ್ದು ನನಗೆ ತಿಳಿದಿಲ್ಲ : ಡಿಕೆ ಶಿವಕುಮಾರ್

ಬೆಂಗಳೂರು: ಬೊಮ್ಮಾಯಿಯವರನ್ನು ನಾಯಿ ಮರಿಗೆ ಹೋಲಿಸಿ ಮಾತನಾಡಿದ್ದು ನನಗೆ ತಿಳಿದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಕಷ್ಟಕ್ಕೆ ಸುಖಕ್ಕೆ ನಾಯಿ ಬೇಕು, ನಾಯಿ ನಾರಾಯಣ ಅಂತಾರೆ ನಾಯಿ ಬಹಳ ಪ್ರಿಯವಾದ ಪ್ರಾಣಿ, ಸಿದ್ದರಾಮಯ್ಯ ಹೇಳಿದ್ದು ನನಗೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇನ್ನು ಇದೇ ವಿಷಯಕ್ಕೆ ಸಚಿವ ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂರನ್ನು ನಾಯಿ ಮರಿಗೆ ಹೋಲಿಕೆ ಮಾಡುವುದು ಎಷ್ಟು ಸರಿ? ಗಣ್ಯರ ಬಗ್ಗೆ ಲಘುವಾಗಿ ಮಾತನಾಡುವುದು ಕಾಂಗ್ರೆಸ್ ಸಂಸ್ಕೃತಿ, ನಾನು ಕೂಡ ಸಿದ್ದರಾಮಯ್ಯ ಬಗ್ಗೆ ಲಘುವಾಗಿ ಮಾತಾಡಬಹುದು.ಸಿಎಂ ಬಗ್ಗೆ ಹಗುರ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಕ್ಷಮೆ ಕೇಳಬೇಕು ಎಂದು ಸಚಿವ ಶ್ರೀರಾಮುಲು ಒತ್ತಾಯಿಸಿದ್ದಾರೆ.


ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ನಾಲಿಗೆ ಹರಿಬಿಟ್ಟಿದ್ದಾರೆ. ಬಿಜೆಪಿ ಮತ್ತು ಸಿಎಂ ಬೊಮ್ಮಾಯಿಯವರನ್ನು ಟೀಕಿಸುವ ಭರದಲ್ಲಿ ನಾಯಿಗೆ ಹೋಲಿಕೆ ಮಾಡಿದ್ದಾರೆ.ಸಿಎಂ ಬಸವರಾಜ ಬೊಮ್ಮಾಯಿಯವರೇ ನಿಮಗೆ ಧಮ್ಮಿದ್ದರೆ, ತಾಕತ್ತಿದ್ದರೆ ರಾಜ್ಯಕ್ಕೆ ಕೇಂದ್ರದಿಂದ ಅನುದಾನ ತರಿಸಿ, ಈ ರಾಜ್ಯದ ಜನತೆಯ ಪರವಾಗಿ ಕೆಲಸ ಮಾಡಿ.

ನಿಮಗೆ ಆ ಧೈರ್ಯ. ತಾಕತ್ತು, ಧಮ್ಮು ಎಲ್ಲಿದೆ? ನರೇಂದ್ರ ಮೋದಿಯವರ ಮುಂದೆ ನಾಯಿಮರಿಯಂತೆ ಮುದುಡಿಕೊಂಡು ಕೂರುತ್ತೀರಿ ಎಂದು ಟೀಕಿಸಿದ್ದರು.

Related Articles

- Advertisement -

Latest Articles