ಬೆಂಗಳೂರು: I.N.D.I.A ಮೈತ್ರಿಗಾಗಿ ಸ್ಟಾಲಿನ್ ಜೊತೆ ಡಿ.ಕೆ.ಶಿವಕುಮಾರ್ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸ್ಟಾಲಿನ್ ಜೊತೆ ಡಿ.ಕೆ. ಶಿವಕುಮಾರ್ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಹೀಗಾಗಿ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.
ಈಗಿನ ನೀರಾವರಿ ಸಚಿವರಿಗೆ ಜವಾಬ್ದಾರಿ ಇಲ್ಲ. ನೀರಾವರಿ ವಿಚಾರದ ಕುರಿತು ಬೇಕಾಬಿಟ್ಟಿ ಮಾತಾಡುತ್ತಾರೆ. ಈ ಹಿಂದೆಯೂ ಕಾವೇರಿ ವಿಚಾರದಲ್ಲಿ ಇಂತಹ ಪರಿಸ್ಥಿತಿ ಬಂದಿತ್ತು. ಆಗ ನೀರಾವರಿ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ, ಎಂ.ಬಿ. ಪಾಟೀಲ್ ಚೆನ್ನಾಗಿ ನಿರ್ವಹಿಸಿದ್ದರು. ಆದರೆ ಈಗಿನ ನೀರಾವರಿ ಸಚಿವರಿಗೆ ಜವಾಬ್ದಾರಿ ಇಲ್ಲ ಎಂದು ಡಿ.ಕೆ ಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ಸುಳ್ಳು ಸುದ್ದಿಗೆ ಕಡಿವಾಣ: ಹೊಸ ಕಾನೂನು ರಚಿಸುತ್ತೇವೆ ಎಂದ ಗೃಹ ಸಚಿವರು
ನೀರು ಬೇಕಿದ್ದರೆ ರೈತರಿಗೆ ಸುಪ್ರೀಂಕೋರ್ಟ್‌ಗೆ ಹೋಗಿ ಎನ್ನುತ್ತಿದ್ದಾರೆ. ರೈತರನ್ನು ಭೇಟಿ ಮಾಡಲ್ಲ, ವಕೀಲರನ್ನು ಭೇಟಿ ಮಾಡಲ್ಲ, ಬೆಂಗಳೂರಲ್ಲಿ ಕುಳಿತು ಬ್ರ್ಯಾಂಡ್ ಬೆಂಗಳೂರು ಎನ್ನುತ್ತಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.