ಬೆಂಗಳೂರು : ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ರಾಜ್ಯದ ಸಿಎಂ ಆಗಿ ಎರಡನೇ ಬಾರಿ ಸಿದ್ದರಾಮಯ್ಯ ಹಾಗೂ ಮೊದಲ ಬಾರಿ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೊಟ್ ಇಬ್ಬರೂ ನಾಯಕರಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಸಮಾರಂಭದಲ್ಲಿ ಗಣ್ಯಾತಿಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರಲ್ಲಿ ಇಂದು 8 ಶಾಸಕರು ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಎಂ.ಬಿ. ಪಾಟೀಲ್, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಈ ಹಿಂದೆಯೂ ಇವರು ಪೂರ್ಣಾವಧಿಯ ಮುಖ್ಯಮಂತ್ರಿಯಾಗಿ ಅಧಿಕಾರ ನಿಭಾಯಿಸಿ ಯಶಸ್ವಿಯಾಗಿದ್ದರು, ಇದೀಗ ಎರಡನೇ ಭಾರಿ ಮತ್ತೆ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಇಂದು ಪ್ರಮಾಣ ವಚನ ಸಮಾರಂಭ ಜರುಗಲಿದ್ದು ಇಂದು ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ದಾಸರಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷವಾಗಿ ಇದನ್ನು ಸಂಭ್ರಮಿಸಿದ್ದಾರೆ. ಇನ್ನು ರಾಹುಲ್ , ಪ್ರಿಯಾಂಕಾ ಆಗಮಿಸಿದ್ದು, ಡಿಕೆಶಿ ಸ್ವಾಗತ ಕೋರಿದ್ದಾರೆ.