Wednesday, May 31, 2023
spot_img
- Advertisement -spot_img

ಸಿದ್ದು, ಡಿಕೆಶಿಯವರೇ ನಿಮ್ಮ ಅಧಿಕಾರಾವಧಿಯಲ್ಲಿ ಕರ್ನಾಟಕವು ಶಾಂತಿಯುತವಾಗಿರಲಿ :ಬಿಜೆಪಿ ಟ್ವೀಟ್

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಸಿದ್ದರಾಮಯ್ಯ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ಡಿಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಲಿದ್ದಾರೆ ಈ ಹಿನ್ನೆಲೆ ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.

ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು.

ನಿಮ್ಮ ಅಧಿಕಾರಾವಧಿಯಲ್ಲಿ ಕರ್ನಾಟಕವು ಶಾಂತಿಯುತವಾಗಿರಲಿ ಮತ್ತು ಕನ್ನಡಿಗರಿಗೆ ಸುರಕ್ಷತೆಯನ್ನು ಒದಗಿಸುತ್ತೀರ ಎಂದು ನಾವು ಭಾವಿಸುತ್ತೇವೆ ಎಂದು ಟ್ವೀಟ್ ಮಾಡಿದೆ.

ಇನ್ನೂ ಸಿದ್ದರಾಮಯ್ಯ, ಡಿಕೆಶಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ವೀಕ್ಷಣೆಗೆ ಕಂಠೀರವಕ್ಕೆಅಭಿಮಾನಿಗಳ ದಂಡೇ ಹರಿದು ಬರುತ್ತಿದ್ದು, ಪೊಲೀಸ್ ಬಿಗಿ ಬಂದೋ ಬಸ್ತ್ ಮಾಡಲಾಗಿದೆ. ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೊಟ್ ಇಬ್ಬರೂ ನಾಯಕರಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ಸಮಾರಂಭದಲ್ಲಿ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮೊದಲ ಬಾರಿ ಉಪ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಜ್ಯದ ಮೂಲೆ ಮೂಲೆಗಳಿಂದ ಜನರು ನಗರಕ್ಕೆ ಆಗಮಿಸುತ್ತಿದ್ದಾರೆ.

Related Articles

- Advertisement -

Latest Articles