ಬೆಂಗಳೂರು: ಸುಮ್ನೆ ರಸ್ತೆಯಲ್ಲಿ ಹೋಗೋರಿಗೆಲ್ಲಾ ದುಡ್ಡು ಕೊಡೋದಕ್ಕೆ ಆಗಲ್ಲ ಎಂದು ನೂತನ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಯಾರಿಗೆ ಹಣ ಕೊಡಬೇಕು? ಯಾರಿಗೆ ವಿದ್ಯುತ್ ಕೊಡಬೇಕು? ಫಲಾನುಭವಿಗಳು ಯಾರು ಎಂಬುದನ್ನೆಲ್ಲಾ ವರದಿ ಪಡೆದು ಯೋಜನೆ ಅನುಷ್ಠಾನಕ್ಕೆ ತರುತ್ತೇವೆ , ಎಲ್ಲವನ್ನು ಪರಿಶೀಲಿಸಿ ಕೊಡಲಾಗುತ್ತದೆ ಎಂದರು.
ಸಿಎಂ ಸಿದ್ದರಾಮಯ್ಯ ಮಾತನಾಡಿ, ಕಾಂಗ್ರೆಸ್ ನೀಡಿದ ಎಲ್ಲಾ ಭರವಸೆಗಳು ಒಂದೇ ವರ್ಷದಲ್ಲಿ ಈಡೇರಿಸುವ ಭರವಸೆಗಳಲ್ಲ. 5 ವರ್ಷಗಳಲ್ಲಿ ಈಡೇರಿಸುವಂತಹದ್ದು. ಮೊದಲ ಸಂಪುಟದಲ್ಲಿ 5 ಗ್ಯಾರಂಟಿಗಳ ಜಾರಿ ಬಗ್ಗೆ ಮಾತು ಕೊಟ್ಟಿದ್ದೆವು. ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಈಗಾಗಲೇ ನಿರ್ಧಾರ ಮಾಡಿದ್ದು, ಮುಂದಿನ ಸಂಪುಟ ಸಭೆಯ ಬಳಿಕ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.
ಯಾವುದೇ ಗೊಂದಲ ಬೇಡ. ನೀವೆಲ್ಲರೂ ನನ್ನ ಮೇಲೆ ವಿಶ್ವಾಸ ಇಟ್ಟಿದ್ದೀರಿ. ಅದಕ್ಕಾಗಿ ಧನ್ಯವಾದಗಳು ಮತ್ತು ಪ್ರಾಮಾಣಿಕವಾಗಿ ನಿಮ್ಮ ನಂಬಿಕೆ ಉಳಿಸಿಕೊಳ್ಳುತ್ತೇನೆ. ಎಲ್ಲರೂ ಸಹಕಾರ ಕೊಡಿ, ‘‘ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಜತೆಗೆ, ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ಕೆಲಸ ಮಾಡುತ್ತೇನೆ, ಇಂದಿರಾ ಕ್ಯಾಂಟೀನ್, ಶೂ ಭಾಗ್ಯ, ವಿದ್ಯಾಸಿರಿ ಯೋಜನೆಗಳನ್ನ ಹೊಸದಾಗಿ ಜಾರಿಗೊಳಿಸಿದ್ವಿ. ಜನರಿಗೆ ನಮ್ಮ ಮೇಲೆ ವಿಶ್ವಾಸ ಇದೆ. ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ ಎಂದು ಭರವಸೆ ನೀಡಿದರು.