ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇವತ್ತು ಬಿಡುಗಡೆ ಮಾಡುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಇವತ್ತು ಮೊದಲ ಪಟ್ಟಿ ಬಿಡುಗಡೆ ಮಾಡಬೇಕಿತ್ತು. ಮಲ್ಲಿಕಾರ್ಜುನ ಖರ್ಗೆ ಹಬ್ಬಕ್ಕೆ ಬೆಂಗಳೂರಿಗೆ ಬಂದಿದ್ದಾರೆ. ಎರಡು, ಮೂರು ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದರು. ಕಳೆದ 3 ವರ್ಷಗಳಿಂದ ಜನ ಸಾಕಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ. ಯುಗಾದಿ ಸಂದರ್ಭದಲ್ಲಿ ಈ ಕೆಟ್ಟ ಆಡಳಿತ ತೊಲಗಲಿ, ಈ ರೀತಿ ನೀವೂ ಹಾರೈಸಿ, ಕಾಂಗ್ರೆಸ್ ಸರ್ಕಾರ ಜನಪರ ವಾಗಿರಲಿದೆ. ಹಲವಾರು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೀವಿ. ಬಿಜೆಪಿಯವರ ತರಹ ನಾವು ಸುಳ್ಳು ಆಶ್ವಾಸನೆ ಕೊಡಲ್ಲ , ಕರ್ನಾಟಕ ಜನತೆಗೆ ಯುಗಾದಿಯ ಶುಭಾಶಯಗಳು ಎಂದು ಶುಭ ಹಾರೈಸಿದ್ದಾರೆ.
ನಾವು ಕೊಟ್ಟ ಭರವಸೆಗಳನ್ನು ಈಡೇರಿಸಲು ಏನು ಮಾಡಬೇಕು ಎಂಬ ಬಗ್ಗೆ ನಾವು ಈಗಾಗಲೇ ಚರ್ಚೆ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಭರವಸೆಗಳನ್ನು ನಾವು ಈಡೇರಿಸಿಯೇ ತೀರುತ್ತೇವೆ, ಇನ್ನೂ ಕಾಂಗ್ರೆಸ್ ಕಾರ್ಡ್ ಬಗ್ಗೆ ಅದು ಗ್ಯಾರಂಟಿ ಕಾರ್ಡ್ ಅಲ್ಲ ಡೂಪ್ಲಿಕೇಟ್ ಕಾರ್ಡ್ ಎಂದು ಹೆಚ್ ಡಿಕೆ ವ್ಯಂಗ್ಯವಾಡಿದ್ದಾರೆ.