ಬೆಂಗಳೂರು: ಸಿಎಂ ವಿಚಾರವಾಗಿ ಚರ್ಚೆಗೆ ಎಐಸಿಸಿ ವರಿಷ್ಠರು ಮಾಜಿ ಸಿಎಂ ಸಿದ್ದರಾಮಯ್ಯ , ಡಿಕೆಶಿಗೆ ದೆಹಲಿಗೆ ಆಹ್ವಾನಿಸಿದ್ದಾರೆ.
ದೆಹಲಿಗೆ ಹೋಗುವ ಮೊದಲು ಮಾಧ್ಯಮಗಳ ಜೊತೆ ಮಾತನಾಡಿ, ಕಾಂಗ್ರೆಸ್ ಪಕ್ಷ ನನ್ನ ಪಾಲಿನ ದೇವರು. ಕಾಂಗ್ರೆಸ್ ಪಕ್ಷ ನನ್ನ ಪಾಲಿನ ದೇವಾಲಯ. ಕಾಂಗ್ರೆಸ್ ಪಕ್ಷ ನನಗೆ ತಾಯಿ ಇದ್ದಂತೆ. ದೇವರು ಮತ್ತು ತಾಯಿಗೆ ಮಕ್ಕಳಿಗೆ ಏನು ನೀಡಬೇಕು ಎಂಬುದು ಗೊತ್ತಿರುತ್ತದೆ. ನಾನು ನನ್ನ ದೇವರನ್ನು ಭೇಟಿ ಮಾಡಲು ದೇವಾಲಯಕ್ಕೆ ಹೋಗುತ್ತಿದ್ದೇನೆ. ನಾನು ಒಬ್ಬನೇ ಹೋಗುತ್ತಿದ್ದೇನೆ. ಪ್ರಧಾನ ಕಾರ್ಯದರ್ಶಿ ಒಬ್ಬನೇ ಬರುವಂತೆ ಹೇಳಿದ್ದಾರೆ. ಹೀಗಾಗಿ ನಾನೊಬ್ಬನೇ ದೆಹಲಿಗೆ ಹೋಗುತ್ತಿದ್ದೇನೆ” ಎಂದರು.
ನನ್ನ ಆರೋಗ್ಯ ಚೆನ್ನಾಗಿದೆ, ಕಾಂಗ್ರೆಸ್ ಪಕ್ಷವೇ ನನಗೆ ದೊಡ್ಡ ಶಕ್ತಿ. ಕಾಂಗ್ರೆಸ್ ಪಕ್ಷವೇ ನನಗೆ ದೇವಸ್ಥಾನ. ನನ್ನ ಕೆಲಸವನ್ನು ನಾನು ಮಾಡಿದ್ದೇನೆ. ಜನ ನಂಬಿಕೆ ಇಟ್ಟು ಅಧಿಕಾರ ಕೊಟ್ಟಿದ್ದಾರೆ. ರಾಜ್ಯದ ಜನರ ನಂಬಿಕೆ ಉಳಿಸಲು ಶ್ರಮ ಪಡಬೇಕಾಗಿದೆ” ಎಂದು ತಿಳಿಸಿದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿನ್ನೆ ಮಧ್ಯಾಹ್ನ ತಮ್ಮ ಬೆಂಬಲಿಗ ಶಾಸಕರೊಂದಿಗೆ ದೆಹಲಿಗೆ ತೆರಳಿದ್ದು ಮಲ್ಲಿಕಾರ್ಜುನ್ ಖರ್ಗೆ ಜೊತೆ ಸಮಾಲೋಚನೆ ಸಹ ನಡೆಸಿದ್ದಾರೆ.