ಬೆಂಗಳೂರು: ಕರ್ನಾಟಕದ ಎಲ್ಲಾ ಜನತೆಗೆ, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಧನ್ಯವಾದ ಅರ್ಪಿಸುತ್ತೇನೆ. ಇದು ನೀವು ಬಯಸಿದ ಸರ್ಕಾರ, ಜನರ ಧ್ವನಿ ರಾಜ್ಯ ಸರ್ಕಾರದ ಧ್ವನಿಯಾಗಲಿದೆ ಎಂದು ನಿಯೋಜಿತ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಮಾದ್ಯಮದವರೊಂದಿಗೆ ಮಾತನಾಡಿ, ಬಹುದೊಡ್ಡ ಜನಾಶಿರ್ವಾದದೊಂದಿಗೆ ನಾಳೆ ರಚನೆಯಾಗುತ್ತಿರುವ ಕಾಂಗ್ರೆಸ್ ನೂತನ ಸರ್ಕಾರ ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲಿದೆ. ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸ್ತೇವೆ ಎಂದರು.
ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, ‘ನಾವು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಸಚಿವ ಸಂಪುಟ ರಚನೆ ವಿಚಾರವಾಗಿ ಚರ್ಚೆ ಮಾಡುತ್ತೇವೆ. ನಾವು ಸಧ್ಯಕ್ಕೆ ಜನರಿಗೆ ಕೊಟ್ಟಿರುವ ಮಾತು ಉಳಿಸಿಕೊಳ್ಳುವುದು ನಮ್ಮ ಆದ್ಯತೆ. ನಾವೆಲ್ಲಾ ಒಟ್ಟಾಗಿ ಕೆಲಸ ಮಾಡಿ ಜನರ ಸೇವೆ ಮಾಡುತ್ತೇವೆ’ ಎಂದು ತಿಳಿಸಿದರು.
ನಾವು ನಮ್ಮ ಮೊದಲ ಸಚಿವ ಸಂಪುಟದಲ್ಲಿ ನಮ್ಮ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ. ಈ ಸರ್ಕಾರ ನಾಳೆ ರಚನೆ ಆಗುತ್ತಿದ್ದು, ಈ ಕಾರ್ಯಕ್ರಮಕ್ಕೆ ನಮ್ಮ ಎಲ್ಲಾ ನಾಯಕರು ಆಗಮಿಸುತ್ತಿದ್ದಾರೆ. ನೀವು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡುತ್ತೇನೆ ಎಂದರು.