ಬೆಂಗಳೂರು: ನಾನೇ ಕನಕಪುರಕ್ಕೆ ಬಂದು ನಿಮಗೆ ಕೃತಜ್ಞತೆ ಸಲ್ಲಿಸಿ ಅಭಿನಂದನೆ ಸ್ವೀಕರಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ನೀವ್ಯಾರೂ ಬೆಂಗಳೂರಿಗೆ ಬರುವ ತೊಂದರೆ ತೆಗೆದುಕೊಳ್ಳದಿರಿ ಎಂದು ಕನಕಪುರ ಕ್ಷೇತ್ರದ ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿಕೊಂಡಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ,ಮೂರು ದಿನಗಳ ವಿಧಾನಸಭಾ ಕಲಾಪದ ಹಿನ್ನೆಲೆಯಲ್ಲಿ ಅಭಿಮಾನಿಗಳು ಭೇಟಿಗಾಗಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.ಕಳೆದ ಮೂರ್ನಾಲ್ಕು ದಿನಗಳಿಂದ ಕನಕಪುರ ಕ್ಷೇತ್ರದ ಅನೇಕರು ಅಪಾರ ಸಂಖ್ಯೆಯಲ್ಲಿ ಬೆಂಗಳೂರಿಗೆ ಬಂದು ಅಭಿನಂದನೆ ಸಲ್ಲಿಸುತ್ತಿದ್ದಾರೆ.
ನನ್ನ ಕಳಕಳಿಯ ಮನವಿಯೇನೆಂದರೆ ತಾವುಗಳು ಬೆಂಗಳೂರಿಗೆ ಬರುವ ತೊಂದರೆ ತೆಗೆದುಕೊಳ್ಳುವುದು ಬೇಡ. ದೆಹಲಿ ಪ್ರವಾಸದ ನಂತರ ನಾನೇ ಖುದ್ದಾಗಿ ಕನಕಪುರಕ್ಕೆ ಬರುತ್ತೇನೆ ಸದಾ ನಿಮ್ಮ ಆಶೀರ್ವಾದವಿರಲಿ, ಧನ್ಯವಾದಗಳು ಎಂದು ಹೇಳಿದ್ದಾರೆ.