ಬೆಂಗಳೂರು: ಯಾರೂ ಏನು ಬೇಕಾದರೂ ಹೇಳಿಕೊಳ್ಳಲಿ, ನಾನು ಆ ಬಗ್ಗೆ ಏನೂ ಮಾತಾಡುವುದಿಲ್ಲ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ಧರಾಮಯ್ಯ 5 ವರ್ಷವೂ ಸಿಎಂ ಆಗಿರುತ್ತಾರೆ ಎಂದು ಸಚಿವ ಎಂ ಬಿ ಪಾಟೀಲ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.ನಾನು ಆ ಬಗ್ಗೆ ಏನೂ ಮಾತಾಡುವುದಿಲ್ಲ. ಅಧಿಕಾರ ಮತ್ತಿತರ ಪಕ್ಷದ ವಿಚಾರಗಳನ್ನು ನೋಡಿಕೊಳ್ಳಲು ಎಐಸಿಸಿ ಇದೆ. ಕಾಂಗ್ರೆಸ್ ರಾಷ್ಟ್ರೀಯ ಮುಖಂಡರು ಇದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮಾತ್ರ ನಮ್ಮ ಆದ್ಯತೆ ಎಂದು ಹೇಳಿದ್ದಾರೆ.
ವರಿಷ್ಠರು ಹೇಳಿದ್ದನ್ನೇ ನಾನು ಹೇಳಿದ್ದೇನೆ. ವೇಣುಗೋಪಾಲ್ ಏನು ಹೇಳಿದ್ದಾರೋ ಅದನ್ನೇ ನಾನು ಹೇಳಿದ್ದೆ. ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ನನಗೆ ಗೊತ್ತಿಲ್ಲ. ವೇಣುಗೋಪಾಲ್ ಪವರ್ ಶೇರಿಂಗ್ ಇಲ್ಲ ಎಂದಿದ್ರು. ಪವರ್ ಶೇರಿಂಗ್ ಇದ್ದರೆ ಅದು ಜನರ ಜೊತೆ ಮಾತ್ರ ಎಂದಿದ್ದರು. ನಾನು ವೈಯಕ್ತಿಕವಾಗಿ ಯಾವುದೇ ಹೇಳಿಕೆ ನೀಡಿಲ್ಲ ಎಂದು ಎಂ ಬಿ ಪಾಟೀಲ್ ತಿಳಿಸಿದ್ದರು.
ಸಿದ್ಧರಾಮಯ್ಯ 5 ವರ್ಷವೂ ಸಿಎಂ ಆಗಿರುತ್ತಾರೆ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿದ್ದರು. ಈ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದ್ದು, ಈಗ ಆ ವಿಚಾರ ಬೇಡ, ಹೈಕಮಾಂಡ್ ಎಲ್ಲದರ ಬಗ್ಗೆ ತೀರ್ಮಾನ ಮಾಡುತ್ತೆ ಎಂದರು.