ಗುರುಮಠಕಲ್ : ನಾನು ಹೇಳ್ತೇನೆ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ, ದಯವಿಟ್ಟು ನಿಮ್ಮ ಮತ ವ್ಯರ್ಥ ಮಾಡಿಕೊಳ್ಳಬೇಡಿ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ನೂತನ ಕಾಂಗ್ರೆಸ್ ಕಚೇರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿ ಗುರುಮಠಕಲ್ ಮತ್ತೆ ಕಾಂಗ್ರೆಸ್ ಭದ್ರಕೋಟೆ ಆಗುವಂತೆ ಮಾಡಿ ಡಾ. ಮಲ್ಲಿಕಾರ್ಜುನ ಖರ್ಗೆಗೆ ಶಕ್ತಿ ನೀಡಬೇಕು. ಅವರ ಕೈ ಬಲಪಡಿಸಬೇಕು ಎಂದರು. ಖರ್ಗೆ ಅವರ ಋುಣ ತೀರಿಸಲು ನೀವು ಮುಂದಾಗಬೇಕು. ಅವರು ಗುರುಮಠಕಲ್ ಕ್ಷೇತ್ರಕ್ಕೆ ಯಾವ ರೀತಿಯಲ್ಲಿ ಅಭಿವೃದ್ಧಿ ಮಾಡಬೇಕು. ಆ ರೀತಿ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಬರಲು ಗುರುಮಠಕಲ್ ಕ್ಷೇತ್ರದಲ್ಲಿ ಜನರು ಅವರಿಗೆ ವಿಶ್ವಾಸ ತುಂಬಬೇಕು ಎಂದು ಮನವಿ ಮಾಡಿದರು.
ಎಚ್.ಡಿ.ಕುಮಾರಸ್ವಾಮಿ ನಿವೃತ್ತಿಯಾಗುವವರೆಗೂ ನೀವು ಕಾಯುವುದು ಬೇಡ. ನೀವು ಡಿ.ಕೆ.ಶಿವಕುಮಾರ್ ಜೊತೆ ಬನ್ನಿ, ಜೆಡಿಎಸ್ ಅಧಿಕಾರಕ್ಕೆ ಬರದಿದ್ದರೆ ರಾಜಕೀಯ ನಿವೃತ್ತಿ ಪಡೆದುಕೊಳ್ಳುವುದಾಗಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದರು ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಎಂದು ಹೇಳಿ ವ್ಯಂಗ್ಯವಾಡಿದ್ದರು.
ಕುಮಾರಸ್ವಾಮಿಯವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ನೀಡಲಾಗಿತ್ತು ಅದೇ ರೀತಿ ನಾವು ಸಹ ಮುಖ್ಯಮಂತ್ರಿ ಮಾಡಿದ್ದೆವು. ಆದರೆ ಅಧಿಕಾರ ಮಾಡುವಲ್ಲಿ ವಿಫಲರಾದರು. ಅವರಿಗೆ ಸಿಎಂ ಆಗಿ ಜವಾಬ್ದಾರಿ ನಿಭಾಯಿಸಲು ಆಗುವುದಿಲ್ಲ ಎಂದರು.