Tuesday, November 28, 2023
spot_img
- Advertisement -spot_img

ಎಲ್ಲರಿಗೂ ಟಿಕೆಟ್ ನೀಡಿ ಸಮಾಧಾನಪಡಿಸಲು ಸಾಧ್ಯವಿಲ್ಲ: ಡಿ.ಕೆ.ಶಿವಕುಮಾರ್

ದೆಹಲಿ : ನಾನು ಪೂಜಾರಿಯಷ್ಟೆ, ದೇವರಿಗೆ ಒಪ್ಪಿಸುವುದಷ್ಟೇ ನನ್ನ ಕೆಲಸ, ಈ ಬಾರಿ ಯುವಕರಿಗೆ, ಹೆಣ್ಣುಮಕ್ಕಳಿಗೆ ಎಲೆಕ್ಷನ್ ನಲ್ಲಿ ಪ್ರಾಧಾನ್ಯತೆ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿ ಎಲ್ಲರಿಗೂ ಟಿಕೆಟ್ ನೀಡಿ ಸಮಾಧಾನಪಡಿಸಲು ಸಾಧ್ಯವಿಲ್ಲ. ಕೆಲವೊಮ್ಮೆ ಪಕ್ಷಕ್ಕಾಗಿ ನಾವು ತ್ಯಾಗ ಮಾಡಲು ಸಿದ್ಧರಿರಬೇಕಾಗುತ್ತದೆ. ಧರ್ಮಸಿಂಗ್, ಸಿದ್ದರಾಮಯ್ಯ ಸರ್ಕಾರದಲ್ಲಿ ನಾನು ಮಂತ್ರಿ ಆಗಿದ್ನಾ ಎಂದು ಪ್ರಶ್ನಿಸಿದ್ದಾರೆ.

ಈ ಬಾರಿಯ ವಿಧಾನಸಭೆ ಚುನಾವಣೆಗೆ ಗೆಲ್ಲುವ ಮಾನದಂಡಗಳನ್ನು ನೋಡಿಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ. ಬೇರೆ ಯಾವುದೇ ವಿಚಾರವನ್ನು ಪರಿಗಣಿಸುವುದಿಲ್ಲ. ಗೆಲ್ಲುವ ಶಕ್ತಿ ಇದ್ದರೆ ವಿಧಾನ ಪರಿಷತ್ ಸದಸ್ಯರನ್ನು ಕೂಡ ಅಭ್ಯರ್ಥಿ ಸ್ಥಾನಕ್ಕೆ ಪರಿಗಣಿಸುತ್ತೇವೆ ಎಂದರು.

ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೊದಲು 8ರಿಂದ 10 ಬಾರಿ ಸರ್ವೆ ಮಾಡಿಸಿದ್ದೇವೆ, ಇಂದು ಸಂಜೆ ವೇಳೆಗೆ ತೀರ್ಮಾನವಾಗುತ್ತದೆ ಗೆಲ್ಲೋದಾದ್ರೆ ಎಂಎಲ್ಸಿಗಳನ್ನು ಅಭ್ಯರ್ಥಿ ಮಾಡಿದರೆ ತಪ್ಪಿಲ್ಲ, ಎಐಸಿಸಿ ಅಧ್ಯಕ್ಷರು ಕರ್ನಾಟಕದವರೇ, ನಮಗೆ ಗೆಲುವೊಂದೇ ಮಾನದಂಡ. ಗೆಲ್ಲುವ ಅವಕಾಶ ನೋಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ ಎಂದರು.

Related Articles

- Advertisement -spot_img

Latest Articles