Wednesday, May 31, 2023
spot_img
- Advertisement -spot_img

3-4 ದಿನಗಳಲ್ಲಿ ಎರಡನೇ ಪಟ್ಟಿ ಬಿಡುಗಡೆ: ಡಿಕೆಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಎರಡನೇ ಪಟ್ಟಿ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ಬಹುತೇಕ ಶೇ. 95 ರಷ್ಟು ಹಾಲಿ ಶಾಸಕರಿಗೇ ಟಿಕೆಟ್ ಸಿಗಲಿದೆ. ಕೆಲವು ಕ್ಷೇತ್ರಗಳಲ್ಲಿ ಮಾತುಕತೆ ಸಂಧಾನ ನಡೆಯುತ್ತಿದ್ದು, ಎರಡನೇ ಪಟ್ಟಿಯಲ್ಲಿ ಉಳಿದ ಹೆಸರುಗಳು ಪ್ರಕಟವಾಗಲಿದೆ’ ಎಂದು ತಿಳಿಸಿದರು.

ಇದೇ ವೇಳೆ ‘ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ, ‘ಕರ್ನಾಟಕದಲ್ಲಿ ಇಬ್ಬರು ಬಿಜೆಪಿ ಶಾಸಕರು ಚೆಕ್ ಬೌನ್ಸ್ ಹಾಗೂ ಇತರೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಅವರನ್ನು ಅನರ್ಹಗೊಳಿಸಿಲ್ಲ ಯಾಕೆ? ಅವರಿಗೆ ಬೇರೆ, ನಮಗೆ ಬೇರೆ ಕಾನೂನು ಇದೆಯೇ? ನಾವು ಇದನ್ನು ಖಂಡಿಸುತ್ತೇವೆ. ನ್ಯಾಯಾಲಯದಲ್ಲಿ ಈ ವಿಚಾರವಾಗಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

ಧ್ರುವನಾರಾಯಣ ಪುತ್ರನಿಗೆ ಟಿಕೆಟ್ ನೀಡಿರುವ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ ಈ ಕ್ಷೇತ್ರದಲ್ಲಿ ಧ್ರುವನಾರಾಯಣ ಸ್ಪರ್ಧಿಸಬೇಕಿತ್ತು. ಆದರೆ ಅವರು ನಮ್ಮನ್ನು ಅಗಲಿದ್ದಾರೆ. ಹೀಗಾಗಿ ಯುವಕರಾದ ಅವರ ಪುತ್ರನಿಗೆ ಟಿಕೆಟ್ ನೀಡಿದ್ದೇವೆ ಎಂದು ತಿಳಿಸಿದರು.

Related Articles

- Advertisement -

Latest Articles