ದೇವನಹಳ್ಳಿ : ಬೆಳಗಾವಿಯ ಯುವಕ್ರಾಂತಿ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಆಗಮಿಸಲಿದ್ದು, ಅವರು ಬಂದ ನಂತರವೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಟಿಕೆಟ್ ಹಂಚಿಕೆ ಸಂಬಂಧ ಹಾಲಿ ಶಾಸಕರಿಗೆ ಯಾವುದೇ ಸಮಸ್ಯೆ ಇಲ್ಲ. ಹಾಲಿ 7 ಜನ ಶಾಸಕರಿಗೆ ಟಿಕೆಟ್ ಇಲ್ಲ ಎಂಬುದು ಸುಳ್ಳು ಎಂದರು. ಭಾರತ್ ಜೋಡೋ ಯಾತ್ರೆ ಸುದೀರ್ಘ ಯಾತ್ರೆ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮೊದಲ ಬಾರಿಗೆ ಬೆಳಗಾವಿಯ ಯುವ ಕ್ರಾಂತಿ ರ್ಯಾಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
“ಬೆಳಗಾವಿ ರ್ಯಾಲಿಯಲ್ಲಿ ರಾಹುಲ್ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಭಾರತ್ ಜೋಡೋ ಯಾತ್ರೆಯ ಉದ್ದೇಶಗಳು ಮತ್ತು ಗುರಿಗಳ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ. ಇದು ಪಕ್ಷದ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಮತ್ತು ಶಕ್ತಿಯನ್ನು ತುಂಬಲು ಮತ್ತು ಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸುವ ಪ್ರಯತ್ನವಾಗಲಿದೆ ಎಂದು ತಿಳಿಸಿದರು.
ಇನ್ನೂ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ನವದೆಹಲಿಯಲ್ಲಿ ಶುಕ್ರವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಚುನಾವಣೆ ಸಮಿತಿ ಸಭೆ ನಡೆಯಿತು. ಒಟ್ಟು 125 ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಾಗಿದ್ದು, ಮಾರ್ಚ್ 22 ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದೆ.