ಬೆಂಗಳೂರು: ಖಾಸಗಿ ಉದ್ಯೋಗದ ವಿನಿಮಯ ಕೇಂದ್ರ ಸ್ಥಾಪಿಸುವುದಾಗಿ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರದಿಂದ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಾಗಿಲ್ಲ, ಕಾಂಗ್ರೆಸ್ ರಚನೆಯಾದ 24 ಗಂಟೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಆದರೆ ತ್ಯಾಗಕ್ಕೆ ಸಿದ್ಧ ,ಖರ್ಗೆ ಕೈಕೆಳಗೆ ಕೆಲಸ ಮಾಡುವುದಕ್ಕೆ ನಾನು ಇಷ್ಟಪಡುತ್ತೇನೆ. ಖರ್ಗೆ ನಮ್ಮ ಪಕ್ಷದ ಆಸ್ತಿ, ರಾಜ್ಯಕ್ಕೆ ಅವರ ಸೇವೆ ಅಗತ್ಯವಿದೆ ಎಂದು ಹೇಳಿದರು.
ಮುಂದಿನ ಬಾರಿ ಏನೇ ಆದರೂ ಬಿಜೆಪಿ ಅಧಿಕಾರಕ್ಕೆ ಬರೋದಿಲ್ಲ, ಕಾಂಗ್ರೆಸ್ ಮುಂದಿನ ಬಾರಿ ಪ್ರಣಾಳಿಕೆಯಂತೆ ಎಲ್ಲ ಭರವಸೆ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು. ಇನ್ನೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ನನಗೂ ಇದೆ, ಬಿಜೆಪಿಯವರಿಗೂ ಇದೆ ಎಂದು ಹೇಳಿದರು. ಟಿಕೆಟ್ ವಂಚಿತ ಮುಖಂಡರಿಗೆ ಸಮಾಧಾನಪಡಿಸುತ್ತಿದ್ದೇವೆ, ಎಸ್ಸಿ ಎಸ್ಟಿ ಪರಿಶಿಷ್ಟ ಪಂಗಡಕ್ಕೆ ನಮ್ಮ ಬದ್ಧದೆ ತೋರಿಸಿದ್ದೇವೆ ಎಂದು ಇದೇ ವೇಳೆ ತಿಳಿಸಿದರು.