ಬೆಂಗಳೂರು: ಕಪ್ ಈಗಲೂ ಅವರದ್ದೇ, ಮುಂದಕ್ಕೆ ನಮ್ಮದು ಎಂದು ಡಿ.ಕೆ ಸುರೇಶ್ ಹೇಳಿದ್ದಾರೆ. ಕಪ್ ನಮ್ದೆ ಎಂಬ ಸಚಿವ ಆರ್ ಅಶೋಕ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ವ್ಯಂಗ್ಯವಾಡಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಕನಕಪುರ ಕ್ಷೇತ್ರ ರಾಜ್ಯಕ್ಕೆ ಮಾದರಿ ಆಗಿದೆ. ಇಲ್ಲಿನ ಪ್ರತಿ ಮತದಾರರು ತಾವೇ ಶಿವಕುಮಾರ್ ಆಗಿ ಪ್ರಚಾರ ಮಾಡುತ್ತ ಮತ ಹಾಕಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ 140 ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ಜೊತೆಗೆ ಹೊಂದಾಣಿಕೆಯ ಪ್ರಮೇಯ ಬರೋದೇ ಇಲ್ಲ, ರಿಸಲ್ಟ್ ಬಂದ ಮೇಲೆ ತಂತ್ರಗಾರಿಕೆ ಇದ್ದೇ ಇರುತ್ತದೆ. ನಮಗೆ ವಿಶ್ವಾಸ ಇದೆ. ನಾವು ಮ್ಯಾಚ್ ಆಡೋದಕ್ಕೆ ಬಂದಿದ್ದೇವೆ, ಆಡಿ ಗೆಲ್ತೀವಿ. ಕಳೆದ ಬಾರಿ ಮೈತ್ರಿ ಸರ್ಕಾರ ಬಂತು. ನಂತರ ಅದು ಬಿದ್ದು ಹೋಯ್ತು. ನಾವು ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಳ್ಳಲ್ಲ. ರಿಸಲ್ಟ್ ಬರಲಿ, ರಿಸಲ್ಟ್ ಬಂದ ಮೇಲೆ ಹೈಕಮಾಂಡ್ ನಾಯಕರ ಸೂಚನೆಯಂತೆ ನಡೆದುಕೊಳ್ತೇವೆ ಎಂದು ತಿಳಿಸಿದರು.