ಬೆಂಗಳೂರು : ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎಂಬುದು ನಮ್ಮ ಹಾರೈಕೆಯಾಗಿತ್ತು ಎಂದು ಸಂಸದ ಡಿಕೆ ಸುರೇಶ್ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಡಿಕೆಶಿವಕುಮಾರ್ ಸಿಎಂ ಆಗಬೇಕಿತ್ತು, ಪಕ್ಷ ಕಟ್ಟುವಲ್ಲಿ ಅವರ ಪಾತ್ರ ಬಹಳ ಹೆಚ್ಚಿದೆ, ನಿರ್ಧಾರದ ಬಗ್ಗೆ ನನಗೆ ಸಂಪೂರ್ಣ ಸಂತೋಷವಿಲ್ಲ. ಆದರೆ ಕರ್ನಾಟಕದ ಹಿತದೃಷ್ಟಿಯಿಂದ ನಾವು ಬದ್ಧತೆಯನ್ನು ಪೂರೈಸಲು ಬಯಸಿದ್ದೇವೆ. ಅದಕ್ಕಾಗಿಯೇ ಡಿಕೆ ಶಿವಕುಮಾರ್ ಹೈಕಮಾಂಡ್ ನಿರ್ಧಾರವನ್ನು ಒಪ್ಪಿಕೊಳ್ಳಬೇಕಾಯಿತು. ನಾವು ಸಾಕಷ್ಟು ದೂರ ಸಾಗಬೇಕಾಗಿದೆ. ಕಾದು ನೋಡೋಣ ಎಂದಿದ್ದಾರೆ.
ಡಿಸಿಎಂ ಆಗಿ ಆಯ್ಕೆ ಮಾಡಿದ್ದರಿಂದ ನಮಗೆ ಖುಷಿಯಾಗಿಲ್ಲ, ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನ ಸಿಗಬೇಕು ಎಂದು ಬಯಸಿದ್ದೆ. ಆದರೆ, ಅದು ಆಗಲಿಲ್ಲ. ನಾವು ಕಾದು ನೋಡುತ್ತೇವೆ ಎಂದು ಸಂಸದ ಡಿಕೆ ಸುರೇಶ್ ಬೇಸರ ಹೊರಹಾಕಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಂಡಿದೆ. ಪಕ್ಷದ ಹಿತಾಸಕ್ತಿ ಕಾಪಾಡುವ ಕಾರಣಕ್ಕೆ ನಾನು ಒಪ್ಪಿಕೊಂಡಿದ್ದೇನೆ ಎಂದು ಹೇಳಿದ್ದಾರೆ.
ಅಧಿಕಾರ ಹಂಚಿಕೆ ಸೂತ್ರಕ್ಕೆ ಉಭಯ ನಾಯಕರು ಒಪ್ಪಿಕೊಂಡಿದ್ದು, ಮೊದಲಾರ್ಧ ಸಿದ್ದರಾಮಯ್ಯ, ದ್ವೀತಿಯಾರ್ಧ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎನ್ನಲಾಗಿದೆ.