ರಾಮನಗರ: ಕಾಂಗ್ರೆಸ್‍ನಲ್ಲಿ ಪ್ರಾಮಾಣಿಕರಿಗೆ ಮಾತ್ರ ಅವಕಾಶ, ಆತುರ ಇದ್ದರೆ ಏನೂ ಮಾಡಲಾಗುವುದಿಲ್ಲ ಎಂದು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಕೆಲಸ ಮಾಡುವವರನ್ನು ಗಮನದಲ್ಲಿಟ್ಟುಕೊಂಡು ಮೊದಲ ಹಂತದ ಟಿಕೆಟ್ ಘೋಷಣೆಯಾಗಿದೆ. ಪ್ರಸನ್ನ ಗೌಡ ಜೆಡಿಎಸ್ ಸೇರ್ಪಡೆ ಆಗಿರೋದು ಆಶ್ಚರ್ಯ ಏನಿಲ್ಲ. ಇದು ನಿರೀಕ್ಷಿತ ಬೆಳವಣಿಗೆ ಎಂದು ತಿಳಿಸಿದರು.ಚನ್ನಪಟ್ಟಣದಲ್ಲಿಅಭ್ಯರ್ಥಿಗಳ ಕೊರತೆ ಇಲ್ಲ. 6 ರಿಂದ 7 ಜನ ಆಕಾಂಕ್ಷಿಗಳು ನಮ್ಮಲ್ಲಿದ್ದಾರೆ. ಈ ಬಗ್ಗೆ ಕಾರ್ಯಕರ್ತರು, ಮುಖಂಡರ ಜೊತೆ ಸಭೆ ನಡೆಸಿ ಬಳಿಕ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ ಎಂದಿದ್ದಾರೆ.
ನಾನು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಬೇಕಿತ್ತು. ಆದರೆ ಕಾಂಗ್ರೆಸ್ ನಾಯಕತ್ವದಿಂದ ಬೇಸತ್ತಿದ್ದೇನೆ. ಆ ಪಕ್ಷದಲ್ಲಿ ಸ್ಪಷ್ಟ ನಿಲುವು ಇಲ್ಲ. ಸುಳ್ಳು ಘೋಷಣೆ ಮಾಡಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಹೀಗಾಗಿ ಹೆಚ್. ಡಿ ಕುಮಾರಸ್ವಾಮಿ ಅವರ ನಾಯಕತ್ವ ಮೆಚ್ಚಿ ಜೆಡಿಎಸ್ ಪಕ್ಷ ಸೇರುತ್ತಿದ್ದೇನೆ ಎಂದು ಪ್ರಸನ್ನ ಗೌಡ ಹೇಳಿದ್ದರು. ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆ ಆಗಿದ್ದು, ಅದರಲ್ಲಿ ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಆಗಿರಲಿಲ್ಲ. ಅದರ ಬೆನ್ನಲ್ಲೇ ಪ್ರಸನ್ನ ಪಿ ಗೌಡ ಜೆಡಿಎಸ್ ಸೇರಿದ್ದಾರೆ.