ಹಾವೇರಿ: ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನ ಮಾನ ದೊರೆತರೂ, ಇತರೇ ಭಾಷೆಗಳಿಗೆ ಹೋಲಿಕೆ ಮಾಡಿದರೇ ಕೇಂದ್ರ ಸರ್ಕಾರದಿಂದ ಸಿಕ್ಕ ಅನುದಾನ ಕಡಿಮೆಯೇ ಆಗಿದೆ ಎಂದು ಸಾಹಿತಿ ದೊಡ್ಡರಂಗೇಗೌಡರು ವಾಗ್ಧಾಳಿ ನಡೆಸಿದರು.
ಹಾವೇರಿಯಲ್ಲಿಆರಂಭಗೊಂಡಂತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿ, ಡಬಲ್ ಇಂಜಿನ್ ಸರ್ಕಾರದ ವಿರುದ್ಧ ಟೀಕಿಸಿದರು. ಶಾಸ್ತ್ರೀಯ ಭಾಷೆಯ ಸ್ಥಾನ ಮಾನ ಪಡೆದರೂ ನಾವು ಏನೂ ಸಾಧಿಸಲು ಸಾಧ್ಯ ? ಡಬಲ್ ಇಂಜಿನ್ ಸರ್ಕಾರದ ಅನುಕೂಲತೆಗಳ ಬಗ್ಗೆ ಪದೇ ಪದೇ ಹೇಳುವ ಕೇಂದ್ರ ಸರ್ಕಾರ ಕನ್ನಡಕ್ಕೆ ಮಾಡಿರುವ ಅನುಕೂಲ ಏನು ಎಂದು ಕಿಡಿಕಾರಿದ್ದಾರೆ.
2012 ರಿಂದ 2020ರ ಅವಧಿಯಲ್ಲಿ ಸಂಸ್ಕೃತ ಭಾಷೆಗೆ ಕೇಂದ್ರವು ನೀಡಿದ ಅನುದಾನದ ಮೊತ್ತ ರೂ.643 ಕೋಟಿ ಆಗಿದೆ. ಅನುದಾನದ ವಿಚಾರದಲ್ಲಿ ನನಗಿರುವ ಮಾಹಿತಿಯಲ್ಲಿ ತಪ್ಪಿದ್ದರೇ ಸರ್ಕಾರ, ಸಂಬಂಧಪಟ್ಟ ಸಚಿವರು ಅದನ್ನು ಸರಿಪಡಿಸಲಿ ಎಂದು ಆಕ್ರೋಶಿಸಿದ್ದಾರೆ.
ಕನ್ನಡಕ್ಕೆ ನೀಡಲಾಗಿರುವ ಅನುದಾನ ಪರಿಸ್ಥಿತಿಯಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿಯೂ ಗಣನೀಯ ಸುಧಾರಣೆಯೇನೂ ಆಗಿಲ್ಲ ಎನ್ನುವುದು ನನಗಿರುವ ಮಾಹಿತಿ. ಹೆಚ್ಚೆಂದರೇ 2012 ರಿಂದ ಇಲ್ಲಿಯವರೆಗೆ ಐದಾರು ಕೋಟಿ ರೂಪಾಯಿ ಅನುದಾನ ಸಿಕ್ಕಿರಬಹುದು ಎಂದರು.