ನವದೆಹಲಿ: ಇಂದು ಭಾರತದ ಸಂವಿಧಾನ ಪಿತಾಮಹ ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ 132 ನೇ ಜನ್ಮದಿನವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿ ರಾಜಕೀಯ ಗಣ್ಯರು ಶುಭ ಕೋರಿದ್ದಾರೆ.
ಟ್ವಿಟರ್ ಖಾತೆಯಲ್ಲಿ ದ್ರೌಪದಿ ಮುರ್ಮು ‘ನಮ್ಮ ಸಂವಿಧಾನದ ಶಿಲ್ಪಿ ಬಾಬಾಸಾಹೇಬ್ ಭೀಮರಾವ್ ರಾಮ್‌ಜಿ ಅಂಬೇಡ್ಕರ್ ಅವರ ಜನ್ಮದಿನದ ಸಂದರ್ಭದಲ್ಲಿ ನನ್ನೆಲ್ಲಾ ಸಹ ನಾಗರಿಕರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.