ಚಿಕ್ಕಬಳ್ಳಾಪುರ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್ ಬೆಳಗ್ಗೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಪೆರೇಸಂದ್ರದಲ್ಲಿ ಮತದಾನ ಮಾಡಿದರು. ಎಲ್ಲರೂ ಮತದಾನ ಮಾಡಿ ತಮ್ಮ ಹಕ್ಕನ್ನು ಚಲಾಯಿಸಿ, ಸದೃಢ ಕರ್ನಾಟಕ ನಿರ್ಮಿಸೋಣ ಎಂದಿದ್ದಾರೆ. ಈ ಸಂದರ್ಭದಲ್ಲಿ ಅವರ ಪತ್ನಿ ಹಾಗೂ ತಂದೆಯವರು ಇದ್ದರು.
ನನ್ನ ಹುಟ್ಟೂರು ಚಿಕ್ಕಬಳ್ಳಾಪುರದ ಪೆರೇಸಂದ್ರದ ಮತಗಟ್ಟೆಗೆ ತೆರಳಿ ಇಂದು ಕುಟುಂಬ ಸಮೇತ ಮತದಾನ ಮಾಡಲಾಯಿತು. ಪ್ರಜಾಪ್ರಭುತ್ವದಲ್ಲಿ ಮತದಾನ ನಾಗರೀಕರ ಹಕ್ಕು ಮಾತ್ರವಲ್ಲ, ಕರ್ತವ್ಯವೂ ಹೌದು. ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಿ, ಸದೃಢ, ಸಮೃದ್ಧ ಕರ್ನಾಟಕ ನಿರ್ಮಾಣದಲ್ಲಿ ಪಾಲುದಾರರಾಗಿ ಎಂದು ಟ್ವಿಟ್ಟರ್ ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ.