Monday, March 27, 2023
spot_img
- Advertisement -spot_img

ನಾಳೆ, ನಾಡಿದ್ದು ಜೆಡಿಎಸ್‌ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ನಾಳೆ, ನಾಡಿದ್ದು ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆ ಇದೆ. 13 ರಾಜ್ಯಗಳಿಂದ ಕಾರ್ಯಕಾರಿ ಸಮಿತಿಯ ಸದಸ್ಯರು ಆಗಮಿಸಲಿದ್ದಾರೆ. ಜೆಡಿಎಸ್ ಕಾರ್ಯಕಾರಿ ಸಮಿತಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ನೇಮಕ ಆಗಲಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, 126 ಅಭ್ಯರ್ಥಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಚಾಮುಂಡೇಶ್ವರಿ ಸನ್ನಿಧಿಗೆ ಅಭ್ಯರ್ಥಿಗಳೂ ಭೇಟಿ ನೀಡಿದ್ರು. ನವೆಂಬರ್ 1ರಂದು ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ನಾಡಿದ್ದು ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ರಾಷ್ಟ್ರ ಹಾಗೂ ರಾಜ್ಯದ ಸಮಸ್ಯೆಗಳ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗುವುದು ಇದೇ ಅ. 27ಹಾಗೂ 28 ಹಲವಾರು ನಿರ್ಧಾರ ತೆಗೆದುಕೊಳ್ಳಲಾಗುವುದು.

ನವಂಬರ್ 1ರಂದು ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಅಭಿಷೇಕದ ಮೊದಲ ಸಭೆ ನಡೆಯಲಿದೆ. ನಾಳೆ ಅತ್ಯಂತ ಪ್ರಸಕ್ತವಾದ ದಿನ ಹಿನ್ನೆಲೆಯಲ್ಲಿ ಮೊದಲ ಕಾರ್ಯಕ್ರಮ ನಡೆಯಲಿದೆ. ನ.1ರಿಂದ ಮುಳಬಾಗಿಲಿನಲ್ಲಿ ರೈತರ ಸಭೆ ಇರಲಿದೆ ಎಂದು ಮಾಹಿತಿ ನೀಡಿದರು. ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಜೆಡಿಎಸ್​ ಸಹ ಎಲ್ಲಾ ರೀತಿ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಪಂಚರತ್ನ ಎನ್ನುವ ವಿನೂತನ ಕಾರ್ಯಕ್ರಮ ಕೈಗೊಂಡಿದೆ.

ಈ ಬಗ್ಗೆ ಚರ್ಚೆ ನಡೆಸಲು ಅ.27 ಹಾಗೂ ಅ.28ರಂದು ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ದೇವೇಗೌಡ್ರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಬೇರೆಯವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡುತ್ತಾರೆ ಎನ್ನುವ ಚರ್ಚೆಗಳು ನಡೆದಿದ್ದವು. ಆದ್ರೆ, ಮೂಲಗಳ ಪ್ರಕಾರ ಕಾರ್ಯಕಾರ್ಯ ಸಮಿತಿಯಲ್ಲಿ ದೇವೇಗೌಡ ಅವರನ್ನೇ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮರುನೇಮಕ ಮಾಡಲಾಗುತ್ತದೆ ಎಂದರು.

Related Articles

- Advertisement -

Latest Articles