ಮುಡಾ ಕೇಸ್: ಹೈಕೋರ್ಟ್ ಮೆಟ್ಟಿಲೇರಿದ ಇಡಿ, ಸಿದ್ದು ಕುಟುಂಬಕ್ಕೆ ಮತ್ತೆ ಸಂಕಷ್ಟ..!

ಮೈಸೂರು : ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್‌ಗೆ ವಿರುದ್ಧ ಈಗ ಇಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯಲ್ಲಿ ಸಿಎಂ ಹಾಗೂ ಅವರ ಕುಟುಂಬದ ಸದಸ್ಯರ ಮೇಲಿನ ಆರೋಪಗಳಿಗೆ ಪ್ರಾಥಮಿಕ ಸಾಕ್ಷ್ಯಗಳಿವೆ ಎಂದು ಇಡಿ ಹೇಳಿಕೊಂಡಿದೆ.

ಲೋಕಾಯುಕ್ತದ ಬಿ ರಿಪೋರ್ಟ್‌ನಿಂದ ತಾತ್ಕಾಲಿಕವಾಗಿ ಸಿಎಂ ಕುಟುಂಬಕ್ಕೆ ರಿಲೀಫ್ ಸಿಕ್ಕಿದ್ದರೂ, ಪ್ರಕರಣ ಸಂಪೂರ್ಣವಾಗಿ ಮುಕ್ತಾಯವಾಗಿಲ್ಲ ಎಂಬುದು ಇದೀಗ ಸ್ಪಷ್ಟವಾಗುತ್ತಿದೆ. ಇಡಿ ಹಸ್ತಕ್ಷೇಪದಿಂದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ಇದನ್ನೂ ಓದಿ : ಮುಹೂರ್ತ ಫಿಕ್ಸ್, ಕೆಲವೇ ದಿನಗಳಲ್ಲಿ ಯತ್ನಾಳ್‌ ಬಿಜೆಪಿಗೆ ವಾಪಸ್; ರಮೇಶ್‌ ಜಾರಕಿಹೊಳಿ ಹೇಳಿಕೆ

ಈ ಕುರಿತು ಪ್ರತಿಕ್ರಿಯಿಸಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಇದು ಕೇವಲ ತಾತ್ಕಾಲಿಕ ರಿಲೀಫ್ ಮಾತ್ರ. ಮುಡಾ ಪ್ರಕರಣದಲ್ಲಿ ಸಾಕ್ಷ್ಯಗಳು ಬಲವಾಗಿವೆ. ಅಂತಿಮವಾಗಿ ಸಿದ್ದರಾಮಯ್ಯ ಕುಟುಂಬಕ್ಕೆ ಶಿಕ್ಷೆ ಆಗುವ ಸಾಧ್ಯತೆ ಇದೆ, ಎಂದು ಹೇಳಿದ್ದಾರೆ.

ಇದೀಗ ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಹೈಕೋರ್ಟ್‌ನ ನಿರ್ಧಾರ ಬಹಳ ಮಹತ್ವ ಪಡೆದುಕೊಳ್ಳಲಿದೆ ಎಂದು ಹೇಳಲಾಗ್ತಿದೆ.

Leave a Reply

Your email address will not be published. Required fields are marked *