ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಹಿಳಾ ಮಣಿಗಳು ತಮ್ಮ ಶಕ್ತಿ ಪ್ರದರ್ಶಿಸಿದ್ದಾರೆ. ನಾವು ಯಾರಿಗೂ ಕಮ್ಮಿ ಇಲ್ಲ ಅಂತಾ ಅಖಾಡಕ್ಕಿಳಿದವರಲ್ಲಿ ಸೌಮ್ಯಾ ರೆಡ್ಡಿ ಹಿನ್ನಡೆಯಾದ್ರೆ, ಲಕ್ಷ್ಮೀ ಹೆಬ್ಬಾಳ್ಕರ್ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಹಿರಿಯ ರಾಜಕಾರಣಿ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಈ ಬಾರಿಯ ಚುನಾವಣೆಯಲ್ಲಿ ಸಿಕೆ ರಾಮಮೂರ್ತಿ ವಿರುದ್ಧ ಸ್ಪರ್ಧಿಸಿದ್ದು, ಸದ್ಯ ಜಯನಗರ ಕ್ಷೇತ್ರದಲ್ಲಿ ಸೌಮ್ಯಾ ರೆಡ್ಡಿ ಹಿನ್ನಡೆಯಲ್ಲಿದ್ದಾರೆ. ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕಿಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಹಾಲಿ ಶಾಸಕಿಯಾಗಿರುವ ಡಾ.ಅಂಜಲಿ ನಿಂಬಾಳ್ಕರ್ ಹಿನ್ನಡೆಯಲ್ಲಿದ್ದಾರೆ. ಎಂ.ರೂಪಕಲಾ ಶಶಿಧರ್ ಕೋಲಾರದ ಕೆಜಿಎಫ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ ರೂಪಕಲಾ ಮುನ್ನಡೆ ಸಾಧಿಸಿದ್ದಾರೆ, ಮಾಜಿ ಸಚಿವ ದಿವಂಗತ ಖಮರುಲ್ ಇಸ್ಲಾಂ ಪತ್ನಿ ಖನೀಜಾ ಫಾತಿಮಾ ಹಿನ್ನಡೆಯಲ್ಲಿದ್ದು, ಚಂದ್ರಕಾಂತ್ ಮುನ್ನಡೆಯಲ್ಲಿದ್ದಾರೆ. ಕುಸುಮಾ ಬೆಂಗಳೂರಿನ ರಾಜರಾಜೇಶ್ವರಿ ನಗರದಿಂದ ಕುಸುಮಾ ಎಚ್ ಹಿನ್ನಡೆಯಲ್ಲಿದ್ದಾರೆ.
ಬೆಳಗಾವಿ ದಕ್ಷಿಣದಲ್ಲಿ ಪ್ರಭಾವತಿ ಮಸ್ತಮರಡಿ ಹಿನ್ನಡೆಯಲ್ಲಿದ್ದಾರೆ. ಶಶಿಕಲಾ ಜೊಲ್ಲೆ: ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಸಚಿವೆಯಾಗಿ ಕೆಲಸ ಮಾಡಿದ್ದ ಶಶಿಕಲಾ ಜೊಲ್ಲೆ ಹಿನ್ನಡೆಯಲ್ಲಿದ್ದಾರೆ.
ರೂಪಾಲಿ ನಾಯ್ಕ್ ಉತ್ತರ ಕನ್ನಡ ಜಿಲ್ಲೆಯ ಕಾರವಾರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕಿ. ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸದ್ಯ ಕ್ಷೇತ್ರದಲ್ಲಿ ಅವರೇ ಮುನ್ನಡೆ ಸಾಧಿಸಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಕ್ಷೇತ್ರದಲ್ಲಿ ಅವರೇ ಮುನ್ನಡೆ ಸಾಧಿಸಿದ್ದಾರೆ.