ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣಾ ಕಣ ರಂಗೇರಿದ್ದು, ನಾಳೆ ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಎಲೆಕ್ಷನ್ ಸಮಯದಲ್ಲಿ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಚುನಾವಣೆ ವೇಳೆ ಬೆಟ್ಟಿಂಗ್ ಅಡ್ಡೆಗಳ ಮೇಲೆ ನಿಗಾವಹಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಚುನಾವಣೆಯಲ್ಲಿ ಬೆಟ್ಟಿಂಗ್ ಕಂಡು ಬಂದಲ್ಲಿ ಕಠಿಣ ಕ್ರಮಕ್ಕೆ ಪೊಲೀಸರು ನಿರ್ಧರಿಸಿದ್ದಾರೆ. ಕೆಲವು ಆ್ಯಪ್ ಮೂಲಕ ಚುನಾವಣೆ ಬೆಟ್ಟಿಂಗ್ ನಡೆಯುತ್ತಿರುವ ಬಗ್ಗೆ ಸಿಸಿಬಿಗೆ ಮಾಹಿತಿ ಬಂದಿದೆ. ಈ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಆ್ಯಪ್ಗಳ ಮೇಲೆ ಒಂದು ವಾರದಿಂದಲೇ ನಿಗಾ ಇರಿಸಿದ್ದಾರೆ.
ಚುನಾವಣೆಯ ಫಲಿತಾಂಶದ ಮೇಲೆ ಜನರು ನಗದು, ಅಮೂಲ್ಯ ಕೃಷಿ ಭೂಮಿ, ಕುರಿ, ಮೇಕೆ, ಹಸು, ಎತ್ತು ಸೇರಿದಂತೆ ಜಾನುವಾರುಗಳು, ಟ್ರ್ಯಾಕ್ಟರ್‌ಗಳು ಮತ್ತು ಬೈಕ್‌ಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದಾರೆ. ಈ ಹಿಂದಿನ ಚುನಾವಣೆಯಲ್ಲಿ ನಗದು, ಬೈಕ್, ಬಂಗಾರದ ಬೆಟ್ಟಿಂಗ್ ಸಾಮಾನ್ಯವಾಗಿದ್ದರೆ, ಈ ಬಾರಿ ಗ್ರಾಮಸ್ಥರು ಆಡು, ಕುರಿಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದಾರೆ.
ಚುನಾವಣೆಯ ಫಲಿತಾಂಶದ ಮೇಲೆ ಜನರು ನಗದು, ಅಮೂಲ್ಯ ಕೃಷಿ ಭೂಮಿ, ಕುರಿ, ಮೇಕೆ, ಹಸು, ಎತ್ತು ಸೇರಿದಂತೆ ಜಾನುವಾರುಗಳು, ಟ್ರ್ಯಾಕ್ಟರ್‌ಗಳು ಮತ್ತು ಬೈಕ್‌ಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದಾರೆ.