ಶಿವಮೊಗ್ಗ: ಗ್ರಾಮದಲ್ಲಿರುವ ಸಮಸ್ಯೆಗಳನ್ನು ಈಡೇರಿಸದ ಹಿನ್ನಲೆ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕನಸಿನಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿರುವ ಸ್ಮಶಾನ, ರಸ್ತೆ, ಬಸ್ ಸೌಕರ್ಯ ಹಾಗೂ ನೆಟ್‌ವರ್ಕ್ ಸಮಸ್ಯೆ ಬಗೆಹರಿಸದ ಕಾರಣ ಮತದಾನ ಬಹಿಷ್ಕರಿಸಿದ್ದಾರೆ. ಬೆಳಗ್ಗೆಯಿಂದಲೂ ಚುನಾವಣಾ ಅಧಿಕಾರಿಗಳು ಮತದಾರು ಈಗ ಬರಬಹುದು ಎಂದು ಕಾದು ಕುಳಿತಿದ್ದಾರೆ.
ಮೂಲಸೌಕರ್ಯ ಒದಗಿಸಲು ಒತ್ತಾಯಿಸಿ ಗ್ರಾಮಸ್ಥರು ಎಲೆಕ್ಷನ್ ಬಹಿಷ್ಕರಿಸಿದ್ದು, ಮತದಾನ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಅಧಿಕಾರಿಗಳು ಚುನಾವಣೆ ಮುಗಿದ ಬಳಿಕ ಮತ್ತೆ ಗ್ರಾಮಕ್ಕೆ ಬರುತ್ತೇವೆ ಎಂದು ವಾಪಸ್ ಆಗಿದ್ದರು.ಎಷ್ಟೇ ತಂತ್ರಜ್ಞಾನ ಅಭಿವೃದ್ಧಿ ಆದ್ರೂ ನಮ್ಮ ಗ್ರಾಮದಲ್ಲಿ ಇಂಟರ್ನೆಟ್ ಸೌಲಭ್ಯ ಇಲ್ಲ, ಶೀಘ್ರದಲ್ಲಿ ಈ ಸೌಲಭ್ಯ ಕಲ್ಪಿಸಬೇಕು, ಇಲ್ಲದಿದ್ದರೆ ಎಲೆಕ್ಷನ್ ಬಹಿಷ್ಕಾರ ಮಾಡುವುದಾಗಿ ಎಚ್ಚರಿಸಿದ್ದಾರೆ.