Monday, December 4, 2023
spot_img
- Advertisement -spot_img

ಪ್ರಧಾನಿ ಮೋದಿ ವಿರುದ್ಧ ಸುಳ್ಳು ಹೇಳಿಕೆ; ಪ್ರಿಯಾಂಕಾ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ

ನವದೆಹಲಿ: ಪ್ರಧಾನಿ ನರೇಂದ್ರ ಅವರ ವಿರುದ್ಧ ಆಧಾರರಹಿತ ಹಾಗೂ ಪರಿಶೀಲಿಸದ ಹೇಳಿ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಚುನಾವಣಾ ಆಯೋಗವು ಇಂದು ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ನರೇಂದ್ರ ಮೋದಿ ಸರ್ಕಾರ ಸಾರ್ವಜನಿಕ ವಲಯದ ಉದ್ದಿಮೆಗಳನ್ನು ಖಾಸಗೀಕರಣ ಮಾಡಿದೆ ಎಂದು ಪ್ರಿಯಾಂಕಾ ಗಾಂಧಿ ಆಧಾರರಹಿತ ಮತ್ತು ಸುಳ್ಳು ಹೇಳಿಕೆಯನ್ನು ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು.

ಇದನ್ನೂ ಓದಿ: ವಿಜಯೇಂದ್ರ ಆಯ್ಕೆ; ನಮಗಾಗದವರು ವಿಷಯವನ್ನು ದೊಡ್ಡದು ಮಾಡ್ತಿದ್ದಾರೆ: ವಿಶ್ವನಾಥ್

ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಗಾಂಧಿ ಸುಳ್ಳು ಮತ್ತು ಪುರಾವೆಗಳಿಲ್ಲದ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಬಿಜೆಪಿಯು ದೂರು ನೀಡಿತ್ತು. ಅದರ ಆಧಾರದ ಮೇಲೆ ಚುನಾವಣಾ ಸಮಿತಿಯು ಗುರುವಾರ ರಾತ್ರಿ 8 ಗಂಟೆಯೊಳಗೆ ಪ್ರಿಯಾಂಕಾ ಗಾಂಧಿ ಅವರ ಹೇಳಿಕೆಯನ್ನು ವಿವರಿಸುವಂತೆ ಕೇಳಿದೆ.

ನರೇಂದ್ರ ಮೋದಿ ಸರ್ಕಾರವು ಸಾರ್ವಜನಿಕ ವಲಯದ ಉದ್ಯಮಗಳನ್ನು (ಪಿಎಸ್‌ಯು) ಖಾಸಗೀಕರಣಗೊಳಿಸಿದೆ ಎಂದು ಪ್ರಿಯಾಂಕಾ ಗಾಂಧಿ ಅವರು “ಆಧಾರರಹಿತ ಮತ್ತು ಸುಳ್ಳು” ಹೇಳಿಕೆಯನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಮಧ್ಯಪ್ರದೇಶದ ಸಾನ್ವೆರ್ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಪ್ರಿಯಾಂಕಾ ಗಾಂಧಿ, ಪ್ರಧಾನಿ ಮೋದಿಯವರು (ಪಿಎಸ್‌ಯು) ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್‌ಇಎಲ್) ಅನ್ನು ತಮ್ಮ ಕೈಗಾರಿಕೋದ್ಯಮಿ ಸ್ನೇಹಿತರಿಗೆ ನೀಡಿದ್ದಾರೆ ಎಂದು ಆರೋಪಿಸಿದ್ದರು.

ಮಧ್ಯಪ್ರದೇಶದ ಸಾನ್ವೆರ್ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ, ನೀವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಬಂಧಿಸಿದಂತೆ ಪರಿಶೀಲಿಸದ ಮತ್ತು ಸುಳ್ಳು ಹೇಳಿಕೆಗಳನ್ನು ನೀಡಿದ್ದೀರಿ, ಅದು ಸಾರ್ವಜನಿಕರನ್ನು ದಾರಿ ತಪ್ಪಿಸುವ ಮತ್ತು ಪ್ರಧಾನಿಯವರ ಪ್ರತಿಷ್ಠೆಗೆ ಕಳಂಕ ತರುವ ವಿಷಯವನ್ನು ಹೊಂದಿದೆ ಎಂಬುವುದಾಗಿ ಆರೋಪಿಸಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗವು ನೋಟಿಸಿನಲ್ಲಿ ತಿಳಿಸಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles