ಗದಗ: ಬಿಂಕದಕಟ್ಟಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ, ಕ್ಷುಲ್ಲಕ ಕಾರಣಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿದ್ದರಿಂದ ಗಲಾಟೆ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಲಾಠಿ ಚಾರ್ಜ್ ಸಮಯದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಂಜೀವ್ ರೆಡ್ಡಿ ಗೋವನ್ನರ್ ಪೊಲೀಸರನ್ನು ತಡೆದು ಲಾಠಿ ಚಾರ್ಜ್ ಮಾಡಿದನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಏಕಾಏಕಿ ಸುತ್ತುವರಿದ ಪೊಲೀಸರು ಲಾಟಿ ಪ್ರಹಾರ ನಡೆಸಿದ್ದಾರೆ ಇದರಿಂದ ಸಿಟ್ಟಿಗೆದ್ದ ಕಾಂಗ್ರೆಸ್ ಕಾರ್ಯಕರ್ತ ಪೊಲೀಸ್ ಕೊರಳ ಪಟ್ಟಿ ಹಿಡಿದು ಶರ್ಟ್ ಹರಿದು ಹಾಕಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತ ಸಂಜೀವ್ ರೆಡ್ಡಿ ಗೋವನ್ನರ್ ಎನ್ನುವವರ ಮೇಲೆ ಪೊಲೀಸರು ಲಾಟಿ ಪ್ರಹಾರ ನಡೆಸಿದ್ದು, ಏಕಾಏಕಿ ಲಾಠಿ ಚಾರ್ಜ್ ಮಾಡಿದನ್ನು ಪ್ರಶ್ನಿಸಿದ ವ್ಯಕ್ತಿಗೆ ಪೊಲೀಸರು ಥಳಿಸಿದ್ದಾರೆ. ಇವರ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್ ನೇಮಗೌಡ ಪೊಲೀಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.