ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅಕ್ರಮ ವಿದ್ಯುತ್ ಸಂಪರ್ಕ ಪಡೆಯುವ ಮೂಲಕ ‘ವಿದ್ಯುತ್ ಕಳ್ಳತನ’ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಕುರಿತು ವಿಡಿಯೋ ಸಹಿತ ಟ್ವೀಟ್ ಮಾಡಿರುವ ಕಾಂಗ್ರೆಸ್, ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ. ಕುಮಾರಸ್ವಾಮಿಯವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು, 2000 ಯೂನಿಟ್ ಅಲ್ಲ ಎಂದು ಹೇಳಿದೆ.
ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು, ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು ‘ಬರ’ ಎದುರಿಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು? ಎಂದು ಪ್ರಶ್ನಿಸಿದೆ.
ಕೆಲ ದಿನಗಳಿಂದ ವಿದ್ಯುತ್ ವಿಚಾರವಾಗಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಸರ್ಕಾರ ರೈತರಿಗೆ ಸರಿಯಾಗಿ ವಿದ್ಯುತ್ ಕೊಡುತ್ತಿಲ್ಲ. ಕೃತಕ ವಿದ್ಯುತ್ ಅಭಾವ ಸೃಷ್ಟಿಸಲಾಗ್ತಿದೆ ಎಂದು ಆರೋಪಿಸಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.