ಚಂಡೀಗಢ: ಟೆಂಡರ್ ಪ್ರಕ್ರಿಯೆಯಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ನ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಭರತ್ ಭೂಷಣ್ ಆಶು ನಿವಾಸದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶೋಧ ನಡೆಸಿದ್ದಾರೆ. ಈ ವೇಳೆ ₹6 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ಪಂಜಾಬ್‌ನ 25 ಸ್ಥಳಗಳಲ್ಲಿ ಇ.ಡಿ ದಾಳಿ ನಡೆಸಿತ್ತು. ಮಾಜಿ ಸಚಿವ ಭರತ್ ಭೂಷಣ್ ಸೇರಿದಂತೆ ಲೂಧಿಯಾನ ಸುಧಾರಣಾ ಟ್ರಸ್ಟ್ ಮಾಜಿ ಅಧ್ಯಕ್ಷ ರಮಣ್ ಬಾಲಸುಬ್ರಮಣ್ಯಂ ಮತ್ತು ಇತರ ಕೆಲವರ ಮೇಲೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಇಡಿ ಶೋಧ ನಡೆಸಿದೆ.
ನಾಲ್ಕು ಬ್ಯಾಂಕ್ ಲಾಕರ್‌ಗಳಲ್ಲಿ ಇರಿಸಿದ್ದ ₹1.54 ಕೋಟಿ ಮೌಲ್ಯದ ಐದು ಸ್ಥಿರಾಸ್ತಿ, ಬ್ಯಾಂಕ್ ಖಾತೆಗಳಲ್ಲಿ ಇರಿಸಲಾಗಿದ್ದ ₹4.81 ಕೋಟಿ ಜಪ್ತಿ ಮಾಡಲಾಗಿದೆ. ಡಿಜಿಟಲ್ ಸಾಧನಗಳು, ದಾಖಲೆಗಳು ಮತ್ತು ಸುಮಾರು ₹30 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ: ಹಾಲಿವುಡ್ ಸಿನಿಮಾಗಿಂತ ಕಡಿಮೆ ಬಜೆಟ್‌ನಲ್ಲಿ ಚಂದ್ರಲೋಕ ತಲುಪಿದ್ದೇವೆ: ಕೇಂದ್ರ ಸಚಿವ
ಆಹಾರ ಮತ್ತು ನಾಗರಿಕ ಪೂರೈಕೆಯ ಅಧ್ಯಕ್ಷ ರಾಕೇಶ್ ಕುಮಾರ್ ಸಿಂಗ್ಲಾ ಅವರನ್ನು ಭರತ್ ಭೂಷಣ್ ಆಶು ಅವರಿಂದ ಸಂಪರ್ಕಿಸಿದ ಗುತ್ತಿಗೆದಾರರಿಗೆ ಟೆಂಡರ್‌ಗಳನ್ನು ಹಂಚಲಾಗಿದೆ ಎಂದು ಆರೋಪಿಸಲಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.