ಮಂಗಳೂರು: ಸತ್ತು ಹೋಗಿರುವ ಕಾಂಗ್ರೆಸ್ ಜೊತೆ ಬಿಜೆಪಿಯ ಯಾವ ಶಾಸಕರೂ ಹೋಗುವುದಿಲ್ಲ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಮುಳುಗುತ್ತಿರುವ ಹಡಗು ಅವರು ಬರುತ್ತಾರೆ, ಇವರು ಬರುತ್ತಾರೆ ಎಂದು ಕಾಂಗ್ರೆಸ್ಸಿನವರು ಹೇಳಿಕೊಳ್ಳುತ್ತಾರೆ. ಕಾಂಗ್ರೆಸ್ಸಿನಿಂದ ಬಿಜೆಪಿಗೆ ಶಾಸಕರು ಬರುತ್ತಾರೋ, ನಾಯಕರು ಬರುತ್ತಾರೋ ನೋಡೋಣ ಎಂದರು. ರಾತ್ರಿ ಕಂಡ ಬಾವಿಗೆ ಹಗಲು ಬೀಳಲು ಇಷ್ಟ ಪಡುತ್ತಾರೆ? ಎಂದು ಪ್ರಶ್ನಿಸಿದರು.
ದೇಶದ ಮೋದಿ ಪ್ರಧಾನಿಯಾದ ಬಳಿಕ ಇಡೀ ವಿಶ್ವವೇ ನಮ್ಮತ್ತ ನೋಡುತ್ತಿದ್ದು, ಭಾರತ ವಿಶ್ವಗುರುವತ್ತ ಸಾಗುತ್ತಿದೆ. ಇಂತಹ ನಾಯಕನನ್ನು ಕಂಡರೆ ಪಾಕಿಸ್ತಾನ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೆ ಭಯ ಎಂದು ಲೇವಡಿ ಮಾಡಿದ್ದಾರೆ.ಕಾಂಗ್ರೆಸ್ ಬಿಜೆಪಿ ವಿರುದ್ದ ಅಪಪ್ರಚಾರ ಮಾಡುತ್ತಲೇ ನಿರ್ನಾಮವಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.
ಕೇಂದ್ರದ ಬಿಜೆಪಿ ಸರಕಾರದ ನೀಡಿದ ಅಕ್ಕಿಯನ್ನು ಅನ್ನಭಾಗ್ಯ ಮೂಲಕ ಸಿದ್ದರಾಮಯ್ಯ ವಿತರಿಸಿದರು. ಯಾರದೋ ಕೂಸಿಗೆ ಇವರ ಹೆಸರು ಯಾಕೆ ಎಂದು ವ್ಯಂಗ್ಯವಾಡಿದರು.