ಬೆಂಗಳೂರು: ‘ಪೊಲೀಸ್ ವಿಶೇಷ ಶಾಖೆ’ ಸ್ಥಾಪಿಸಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ದುರ್ಗಾ ವಾಹಿನಿಯಿಂದ ಮಾನ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಮನವಿ ನೀಡಲಾಯಿತು. ರಾಜ್ಯದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಘಟನೆಗಳ ಹಿನ್ನೆಲೆ ‘ಲವ್ ಜಿಹಾದ್’ ಪ್ರಕರಣಗಳ ತನಿಖೆ ನಡೆಸಲು ಉತ್ತರ ಪ್ರದೇಶ ಸರ್ಕಾರದ ಮಾದರಿಯಲ್ಲಿ ರಚಿಸಲು ಮನವಿ ಮಾಡಲಾಯಿತು.
ನಂತರ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಲವ್ ಜಿಹಾದ್ ವಿರೋಧಿ ಪೊಲೀಸ್ ದಳ ಸ್ಥಾಪನೆ ಬಗ್ಗೆ ಸರ್ಕಾರದಲ್ಲಿ ಚರ್ಚೆ ಮಾಡುತ್ತೇವೆ. ಮತಾಂತರ ಉದ್ದೇಶದಿಂದ ನಡೆಯುವ ಲವ್ ಜಿಹಾದ್ ಪ್ರಕರಣಗಳನ್ನು ಮತಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ನೋಂದಣಿ ಮಾಡಲು ಪೊಲೀಸ್ ಇಲಾಖೆಯ ಸಭೆಯಲ್ಲಿ ಸೂಚಿಸುತ್ತೇವೆ ಎಂದರು.
ಲವ್ ಜಿಹಾದ್ ಗೆ ಪ್ರಚೋಧನೆ ನೀಡುವ ಮಸೀದಿ, ಮದರಸಾ, ಮೌಲ್ವಿ, ಶಾಹಿನ್ ಗ್ಯಾಂಗ್ ಮೇಲೆ ಕ್ರಮ ಜರುಗಿಸಬೇಕು. ಅಷ್ಟೇ ಅಲ್ಲದೇ ರಾಜ್ಯದಲ್ಲಿ 21,000 ಯುವತಿಯರು, ಮಹಿಳೆಯರು ಕಾಣೆಯಾಗಿದ್ದಾರೆ, ಅದರ ಹಿಂದೆ ಲವ್ ಜಿಹಾದ್ ಮಾಫಿಯಾ ಕಾರ್ಯನಿರತ ಇದೆಯಾ ಪರಿಶೀಲನೆ ಮಾಡಬೇಕು ಎಂದು ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಇದ್ದರೂ ಸಹ ವ್ಯಾಪಕವಾಗಿ ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಮ್‌ಗೆ ಮತಾಂತರ ಮಾಡುವ ಘಟನೆಗಳು ಹೆಚ್ಚಾಗಿದೆ. ಇದನ್ನು ತಡೆಯಲು ‘ಲವ್ ಜಿಹಾದ್ ವಿರೋಧಿ ಪೊಲೀಸ್ ದಳ’ ವನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹ ಮಾಡಿದರು.