ಬೆಂಗಳೂರು: ವಿಪಕ್ಷ ನಾಯಕ , ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳ ಮೋಕ್ಷ ಮಾಡಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದ ಬಳಿ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತರು ಹರಿಹರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ರಾಮಪ್ಪ, ರಾಣೆಬೆನ್ನೂರಿನ ಟಿಕೆಟ್ ಆಕಾಂಕ್ಷಿ ಆರ್ ಶಂಕರ್ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದರು.ತಮ್ಮ ನಾಯಕನಿಗೆ ಟಿಕೆಟ್ ನೀಡಲು ಹರಿಹರದ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದರು. ಸಿದ್ದರಾಮಯ್ಯ ಸದ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸಿದರೆ ಒಳ್ಳೆಯದು ಎಂದು ಚಿಂತೆಯಲ್ಲಿದ್ದಾರೆ.
ಈ ವೇಳೆ ಸಿದ್ದರಾಮಯ್ಯರಿಗೆ ಹೋಗಲು ಚೂರು ಜಾಗವಿಲ್ಲದೇ ಪರದಾಡಬೇಕಾಯಿತು.ಜನರ ಗುಂಪಿನಲ್ಲಿದ್ದ ಸಿದ್ದರಾಮಯ್ಯ ಕಾರ್ಯಕರ್ತರೊಬ್ಬರಿಗೆ ಹೊಡೆದಿದ್ದಾರೆ. ಇದೇ ವೇಳೆ ನೂಕು ನುಗ್ಗಲು ನಡೆದಿದೆ.
ಇದ್ರ ಮಧ್ಯೆ ಸಿದ್ದರಾಮಯ್ಯ ಬೆಂಬಲಿಗರ ನಡುವೆಯಿಂದ ಕಚೇರಿಗೆ ಹೋಗಲು ಮುಂದಾಗಿದ್ದರು. ಈ ವೇಳೆ ಕಾರ್ಯಕರ್ತನೊಬ್ಬ ನಮ್ಮ ನಾಯಕನಿಗೆ ಟಿಕೆಟ್ ಎಂದು ಒತ್ತಾಯಿಸಿದ್ದಾನೆ. ಈ ವೇಳೆ ಕೋಪಗೊಂಡು ಸಿದ್ದರಾಮಯ್ಯ ಕಪಾಳ ಮೋಕ್ಷ ಮಾಡಿದ್ದಾರೆ.