ತುಮಕೂರು : ಬಿಜೆಪಿ ತೊರೆದು ಪುನಃ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಚರ್ಚೆಯ ನಡುವೆ ಮಾಜಿ ಸಂಸದ ಎಸ್ .ಪಿ ಮುದ್ದಹನುಮೇಗೌಡ ಇಂದು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ. ಹಾಗಾಗಿ, ಬಹುತೇಕ ಇಂದು ತಮ್ಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜಿಲ್ಲೆಗೆ ಆಗಮಿಸಿದ್ದಾಗ ಮುದ್ದಹನುಮೇಗೌಡರು ಗೈರಾಗಿದ್ದರು. ಬಿಜೆಪಿಯ ಬಹುತೇಕ ಕಾರ್ಯಕ್ರಮಗಳಿಂದಲೂ ಗೌಡರು ದೂರ ಉಳಿಯುತ್ತಿದ್ದಾರೆ.
ಇದನ್ನೂ ಓದಿ : ವಿಡಿಯೋದಲ್ಲಿ ಸಿಎಂ ಪುತ್ರ ಯತೀಂದ್ರ ಹೇಳಿದ ವಿವೇಕಾನಂದ ಇವ್ರೇನಾ?
ಕಳೆದ ಲೋಕಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಸಂಸದರಾಗಿದ್ದರೂ ಮುದ್ದಹನುಮೇಗೌಡರಿಗೆ ಟಿಕೆಟ್ ಕೈ ತಪ್ಪಿತ್ತು. ಇದರಿಂದ ಬೇಸತ್ತು ವಿಧಾನಸಭಾ ಚುನಾವಣೆಯ ವೇಳೆ ಅವರು ಬಿಜೆಪಿ ಸೇರಿದ್ದರು. ಆದರೆ, ಈಗ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡಿರುವುದರಿಂದ ಈ ಬಾರಿಯೂ ಲೋಕಸಭಾ ಟಿಕೆಟ್ ಸಿಗೋದು ಅನುಮಾನ. ಈ ಕಾರಣಕ್ಕೆ ಮತ್ತೆ ಕೈ ಹಿಡಿಯುವ ಸಾಧ್ಯತೆ ಇದೆ.
ಇಂದು ಬೆಳಿಗ್ಗೆ 11 ಗಂಟೆಗೆ ಮುದ್ದಹನುಮೇಗೌಡರು ಸುದ್ದಿಗೋಷ್ಠಿ ಕರೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ತಮ್ಮ ಮುಂದಿನ ನಿರ್ಧಾ ತಿಳಿಸುವ ಸಾಧ್ಯತೆ ಇದೆ. ಒಂದು ವೇಳೆ ಗೌಡರು ಮತ್ತೆ ಕಾಂಗ್ರೆಸ್ ಸೇರ್ಪಡೆಯಾದರೆ ಲೋಕಸಭೆಗೆ ಕಾಂಗ್ರೆಸ್ ಸಿಗಬಹುದಾ ಎಂಬ ಪ್ರಶ್ನೆ ಎದ್ದಿದೆ. ಯಾಕೆಂದರೆ, ಕಳೆದ ಬಾರಿ ಹಾಲಿ ಸಂಸದರಾಗಿದ್ದರೂ ಟಿಕೆಟ್ ಸಿಕ್ಕಿಲ್ಲ. ಈಗ ಬಿಜೆಪಿಗೆ ಹೋಗಿ ವಾಪಸ್ ಬಂದವರಿಗೆ ಕಾಂಗ್ರೆಸ್ ಟಿಕೆಟ್ ಕೊಡಬಹುದಾ? ಎಂಬ ಅನುಮಾನ ಶುರುವಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.