ಯಾವೊನೋ ಅವನು ಮುಡಾದಲ್ಲಿ ಹೆಂಡತಿ ಹೆಸರಲ್ಲಿ 14 ಸೈಟ್ ಹೊಡೆದೋನು..!

ಕೋಲಾರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಸತ್ತುಹೋಗಿದೆ. ಸತ್ತ ಸರ್ಕಾರದ ಹೆಣವನ್ನು ಸಿದ್ದರಾಮಯ್ಯ ಮುಂದೆ ಹೊರುತ್ತಿದ್ದಾರೆ, ಡಿಕೆ ಶಿವಕುಮಾರ್ ಹಿಂದೆ ಹೊರುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಟೀಕೆ ಮಾಡಿದ್ದಾರೆ

ಕೆಜಿಎಫ್‌ನಲ್ಲಿ ನಡೆದ ಭೀಮ ನಡಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಆಡಳಿತ ಮತ್ತು ಗ್ಯಾರಂಟಿಗಳ ಬಗ್ಗೆ ವ್ಯಂಗ್ಯವಾಡಿದರು.ಬಕೇಂದ್ರ ವಿತ್ತ ಸಚಿವರ ಬಗ್ಗೆ ಬಳಸಿದ ಏಕವಚನ ಪದಗಳ ಕುರಿತು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರು ಇನ್ನೂ ಎರಡುವರೆ ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂಬ ಪುತ್ರ ಯತೀಂದ್ರ ಅವರ ಹೇಳಿಕೆ ಸಂಬಂಧ ಪ್ರತಿಕ್ರಿಯಿಸಿ, ಅಪ್ಪ ಮುಂದುವರೆದರೆ ತನ್ನ ಜೋಳಿಗೆ ತುಂಬುತ್ತೆ ಅಂದುಕೊಂಡಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮ ಮಗನಷ್ಟೇ ಅಲ್ಲದೆ ಹಲವರಿಂದ ಈ ರೀತಿ ಹೇಳಿಸುತ್ತಿದ್ದಾರೆ. ಹಾಗೆ ಹೇಳಿ ಕೆಲವರ ಮಂತ್ರಿ ಪದವಿಯೇ ಹೋಗಿದೆ. ಬೆಳಗಾವಿಯಲ್ಲಿ ಸತೀಶ್ ಜಾರಕೊಹೊಳಿ ಅವರನ್ನು ಎತ್ತಿಕಟ್ಟುತ್ತಿದ್ದಾರೆಂದು ದೂರಿದರು.

ವಿಶ್ವದ ಕುಖ್ಯಾತ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯ..!
ಸಿದ್ದರಾಮಯ್ಯನವರನ್ನು ‘ಹದಿನಾರು ಬಾರಿ ಬಜೆಟ್ ಮಂಡಿಸಿದ ವಿಶ್ವದ ಕುಖ್ಯಾತ ಅರ್ಥಶಾಸ್ತ್ರಜ್ಞ’ ಎಂದು ವ್ಯಂಗ್ಯವಾಡಿದ ಸಿಂಹ, ಇವರು ಸತ್ತ ಸರ್ಕಾರದ ಮುಖ್ಯಮಂತ್ರಿ. ಸರ್ಕಾರ ಸತ್ತುಹೋಗಿದೆ. ಸತ್ತ ಸರ್ಕಾರದ ಹೆಣವನ್ನು ಸಿದ್ದರಾಮಯ್ಯ ಮುಂದೆ ಹೊರುತ್ತಿದ್ದಾರೆ, ಡಿಕೆ ಶಿವಕುಮಾರ್ ಹಿಂದೆ ಹೊರುತ್ತಿದ್ದಾರೆ ಎಂದು ತೀಕ್ಷ್ಣವಾಗಿ ಟೀಕಿಸಿದರು. ಯಾರೇ ಹೊರಲಿ, ಆದರೆ ಸರ್ಕಾರ ಮಾತ್ರ ಸತ್ತೋಗಿದೆ. ಈ ಸತ್ತ ಸರ್ಕಾರವನ್ನು ತೊಲಗಿಸಲು ರಾಜ್ಯದ ಜನರು ತೀರ್ಮಾನ ಮಾಡಿದ್ದಾರೆ. ನೂರ ನಲವತ್ತು ಸೀಟು ಕೊಟ್ಟ ಜನರು ಮಾಡಿದ ತಪ್ಪಿಗೆ ಜನರು ಮತ್ತು ಮೈಮರೆತ ಬಿಜೆಪಿಯವರು ಅನುಭವಿಸಬೇಕು ಎಂದರು.

ಇನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸಿದ್ದರಾಮಯ್ಯ ಅವರು ಏಕವಚನದಲ್ಲಿ ಮಾತನಾಡಿರುವುದನ್ನು ತೀವ್ರವಾಗಿ ಖಂಡಿಸಿದ ಪ್ರತಾಪ್ ಸಿಂಹ, ನೀವು ಒಬ್ಬ ಹಣಕಾಸು ಸಚಿವರಾಗಿ ಕೇಂದ್ರದ ಹಣಕಾಸು ಸಚಿವರ ಹೆಸರು ಗೊತ್ತಿಲ್ಲವೇ? ಗೊತ್ತಿದ್ದರೂ ಈ ರೀತಿ ಉಢಾಪೆ ಮಾತಾಡಿದ್ರಾ? ಎಂದು ಪ್ರಶ್ನಿಸಿದರು.

ನಾವು ನಿಮ್ಮನ್ನ ‘ಯಾವೊನೋ ಅವನು ಮುಡಾದಲ್ಲಿ ಹೆಂಡತಿ ಹೆಸರಲ್ಲಿ 14 ಸೈಟ್ ಹೊಡೆದೋನು ಯಾವೋನೋ’ ಅಂದರೆ‌ ನಿಮಗೆ ಹೇಗಾಗುತ್ತೆ. ಕೇಂದ್ರ ಸಚಿವೆ ಹೆಣ್ಣು ಮಗಳ ಬಗ್ಗೆ ಹೀಗೆ ಮಾತಾಡಿ ಸಮಾಜಕ್ಕೆ ಯಾವ ಮೇಲ್ಪಂಕ್ತಿ ಹಾಕಿ ಕೊಡುತ್ತಿದ್ದೀರಿ‌ ಎಂದು ಕಿಡಿಕಾರಿದರು ಇದೇ ವೇಳೆ ದ್ವೇಷ ಬಾಷಣ ಬಿಲ್ ಪಾಸ್ ಆದರೆ, ಮೊದಲ ಪ್ರಕರಣ ಸಿದ್ದರಾಮಯ್ಯ ಅವರ ಮೇಲೆ ಹಾಕಬೇಕು. ದೇಶದ ಹೆಣ್ಣು ಮಗಳ ಬಗ್ಗೆ ಅಗೌರವ ತೋರಿರುವ ಸಿದ್ದರಾಮಯ್ಯ ಮೇಲೆ ಕೇಸ್ ದಾಖಲು ಮಾಡಬೇಕು ಎಂದು ಪ್ರತಾಪ್ ಸಿಂಹ ಆಗ್ರಹಿಸಿದರು.

Leave a Reply

Your email address will not be published. Required fields are marked *