ಬೆಂಗಳೂರು : 2024ರ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಕರೆದಿರುವ ಸರ್ವ ಪಕ್ಷ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡರು ಭಾಗವಹಿಸಲಿದ್ದು, ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಸೋಮವಾರದಿಂದ ನಡೆಯಲಿರುವ ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳಲಿರುವ ಮಾಜಿ ಪ್ರಧಾನಿ ದೇವೇಗೌಡರು, ಇದೇ ವೇಳೆ ಜೆಡಿಎಸ್-ಬಿಜೆಪಿ ಮೈತ್ರಿಗೆ ಅಧಿಕೃತ ಮುದ್ರೆ ಹಾಕುವ ಸಾಧ್ಯತೆ ಇದೆ. ಮೋದಿ ಅಮಿತ್ ಶಾ ಜೊತೆಗೆ ಮೈತ್ರಿ ಕುರಿತು ಅಂತಿಮ ಸುತ್ತಿನ ಮಾತುಕತೆ ನಡೆಸಲಿದ್ದು, ಈ ಮಾತುಕತೆ ವೇಳೆ ಕ್ಷೇತ್ರಗಳ ಹಂಚಿಕೆಯು ಆಗಬಹುದು. ಈ ಮೂಲಕ ಬಿಜೆಪಿ-ಜೆಡಿಎಸ್ ಮೈತ್ರಿಯಾದರೆ ಕಾಂಗ್ರೆಸ್ ಲೋಕಾ ಚುನಾವಣೆ ಗೆಲ್ಲುವ ಗುರಿ ಕಠಿಣವಾಗಲಿದೆ.
ಇದನ್ನೂ ಓದಿ : ತೆಲಂಗಾಣದಲ್ಲಿ ಕಾಂಗ್ರೆಸ್ ‘ವಿಜಯಭೇರಿ’ ಸಮಾವೇಶ : 6 ಗ್ಯಾರಂಟಿ ಘೋಷಣೆ ಸಾಧ್ಯತೆ
ಕಾಂಗ್ರೆಸ್ ಮಿಷನ್ 20 ಮೇಲೆ ಬಿಜೆಪಿ-ಜೆಡಿಎಸ್ ಜಾತಿ ಲೆಕ್ಕಾಚಾರ ಪ್ರಯೋಗ ಮಾಡಲಿದೆ. ಹಿಂದುತ್ವದ, ಒಕ್ಕಲಿಗ, ಲಿಂಗಾಯತ ಮತಗಳು ಇರುವ ಕ್ಷೇತ್ರಗಳ ಹಂಚಿಕೆಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಂಡು, ಗ್ಯಾರಂಟಿ ಮೇಲೆ ನಂಬಿಕೊಂಡಿರುವ ಕಾಂಗ್ರೆಸ್ ಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಶಾಪವಾಗಿ ತಟ್ಟಬಹುದು.
ಇದನ್ನೂ ಓದಿ : ಕಲ್ಯಾಣ ಕರ್ನಾಟಕ ವಿಮೋಚನಾ ದಿನ: ಕಲಬುರಗಿಯಲ್ಲಿ ಸಿಎಂ ಧ್ವಜಾರೋಹಣ
ಮಾಜಿ ಸಿಎಂ ಕುಮಾರಸ್ವಾಮಿ ಆಗಮನದಿಂದ ಮತ್ತೆ ಒಕ್ಕಲಿಗ ಮತಗಳು ವಾಪಸ್ ಆಗುವ ಚಿಂತನೆ ಮಾಡಲಾಗಿದ್ದು, ಹಾಗೆಯೆ ಉತ್ತರ ಕರ್ನಾಟಕದ ಜಿಲ್ಲೆಯಲ್ಲಿ ಇದೆ ರೀತಿ ಲಿಂಗಾಯತ ಮತಗಳನ್ನು ಒಗ್ಗೂಡಿಸಲು ಬಿಜೆಪಿ ಚಿಂತನೆಯನ್ನು ನಡೆಸಿದೆ. ಹಬ್ಬ ಮುಗಿದ ಬಳಿಕ ದೆಹಲಿಯಲ್ಲಿ ಉಭಯ ನಾಯಕರಿಂದ ಜಂಟಿ ಸುದ್ದಿಗೋಷ್ಠಿ ನಡೆಯಲಿದ್ದು, ಈ ಸಂದರ್ಭದಲ್ಲಿ ಕ್ಷೇತ್ರಗಳ ಹಂಚಿಕೆ ವಿವರ ಸಿಗಲಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.