Thursday, September 28, 2023
spot_img
- Advertisement -spot_img

ತಾಯಂದಿರ ಮುಖದಲ್ಲಿ ನೆಮ್ಮದಿಯ ನಗೆ ಕಾಣಲು ಉತ್ಸುಕನಾಗಿದ್ದೇನೆ: ಸಿಎಂ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಇಂದು ಮೈಸೂರಿನಲ್ಲಿ ಅಧಿಕೃತ ಚಾಲನೆ ಸಿಗಲಿದೆ. ಅದ್ದೂರಿ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ‘ತಾಯಂದಿರ ಮುಖದಲ್ಲಿ ಮೂಡುವ ನೆಮ್ಮದಿಯ ನಗೆ ಕಾಣಲು ಉತ್ಸುಕನಾಗಿದ್ದೇನೆ’ ಎಂದು ಹೇಳಿದ್ದಾರೆ.

‘ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ “ಗೃಹಲಕ್ಷ್ಮಿ” ಯೋಜನೆಯಿಂದ ಸ್ವತಂತ್ರ, ಸ್ವಾವಲಂಬಿ ಬದುಕಿಗೆ ಪಾದಾರ್ಪಣೆ ಮಾಡಲಿದ್ದಾರೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; ‘ಗೃಹಲಕ್ಷ್ಮಿ’ಗೆ ಚಾಲನೆ ನೀಡಲು ರಾಜ್ಯಕ್ಕೆ ಇಂದು ರಾಹುಲ್ ಆಗಮನ

‘ನಮ್ಮ ಸರ್ಕಾರ ರಾಜ್ಯದ ಪ್ರತಿಯೊಬ್ಬ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ 2000 ರೂಪಾಯಿಗಳನ್ನು ನೇರವಾಗಿ ವರ್ಗಾವಣೆ ಮಾಡಿ ನುಡಿದಂತೆ ನಡೆಯಲಿದೆ. ಇದೊಂದು ಐತಿಹಾಸಿಕ ದಿನ. ಕಾರ್ಯಕ್ರಮದ ಚಾಲನೆಗೆ ಇನ್ನೇನು ಕೆಲವೇ ನಿಮಿಷಗಳು ಉಳಿದಿರುವ ಈ ಹೊತ್ತಿನಲ್ಲಿ ನಾಡಿನ ತಾಯಂದಿರ ಮುಖದಲ್ಲಿ ಮೂಡುವ ನೆಮ್ಮದಿಯ ನಗೆ ಕಾಣಲು ಉತ್ಸುಕನಾಗಿದ್ದೇನೆ. ಮಹಿಳೆಯರ ಸಬಲೀಕರಣದಿಂದ ಬಲಿಷ್ಠ ಸಮಾಜ ನಿರ್ಮಾಣ. ಮಹಿಳಾ ಸಮಾನತೆಯಿಂದ ಸಮ ಸಮಾಜ ಸ್ಥಾಪನೆ’ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಗೃಹಲಕ್ಷ್ಮಿಯನ್ನು ತುಂಬು ಹೃದಯದಿಂದ ಸ್ವಾಗತಿಸಿ

‘ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ರಾಹುಲ್ ಗಾಂಧಿ ಅವರು ಮೈಸೂರಿನಲ್ಲಿ ಇಂದು ಬೆಳಗ್ಗೆ 11ಗಂಟೆಗೆ ಚಾಲನೆ ನೀಡುತ್ತಿದ್ದು 10,400 ಸ್ಥಳಗಳಲ್ಲಿ ಏಕ ಕಾಲಕ್ಕೆ ಚಾಲನೆ ಸಿಗಲಿದೆ. ಕಾರ್ಯಕ್ರಮದ ನೇರಪ್ರಸಾರವನ್ನೂ ಸಹ ನೀವು ವೀಕ್ಷಿಸಬಹುದು. ಇಂದು ನಿಮ್ಮ ಮನೆಗೆ ಬರಲಿರುವ ಗೃಹಲಕ್ಷ್ಮಿಯನ್ನು ತುಂಬು ಹೃದಯದಿಂದ ಸ್ವಾಗತಿಸಿ’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles