ನವದೆಹಲಿ : 2023 ರ ಬಜೆಟ್‌ನ್ನು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದು, ಹೊಸ ತೆರಿಗೆ ವಿಧಾನದ ಅಡಿಯಲ್ಲಿ ವೈಯಕ್ತಿಕ ಆದಾಯ ತೆರಿಗೆ ವಿನಾಯಿತಿ, ದೇಖೋ ಅಪ್ನಾ ದೇಶ್ ಯೋಜನೆಯಲ್ಲಿ ದೇಶದ 50 ಪ್ರಮುಖ ಪ್ರವಾಸಿತಾಣಗಳ ಅಭಿವೃದ್ಧಿ ಬಗ್ಗೆ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಕೋವಿಡ್ ಸಮಯದಲ್ಲಿ ತೀವ್ರ ತೊಂದರೆ ಎದುರಿಸಿದ ನಂತರ ಪ್ರಯಾಣ ಮತ್ತು ಪ್ರವಾಸೋದ್ಯಮ ಉದ್ಯಮವು ಸ್ವಲ್ಪ ಚೇತರಿಕೆ ಕಂಡಿದೆ. ಸಾಂಕ್ರಾಮಿಕ ರೋಗದಿಂದ ಇನ್ನೂ ತತ್ತರಿಸುತ್ತಿರುವ ಸವಾಲುಗಳು, ವಿಮಾನಗಳು ಮತ್ತು ಹೋಟೆಲ್‌ಗಳ ಮೇಲಿನ ಹೆಚ್ಚಿನ ಜಿಎಸ್‌ಟಿ ದರಗಳ ಸ್ವರೂಪ, ಉದ್ಯಮವು ಇತರ ದೇಶಗಳೊಂದಿಗೆ ಸ್ಪರ್ಧಿಸಲು ಮತ್ತು ಪ್ರವಾಸಿಗರನ್ನು ಆಕರ್ಷಿಸಲು ಕಷ್ಟಕರವಾಗಿತ್ತು.
ಹೊಸ ತೆರಿಗೆ ವಿಧಾನದ ಅಡಿಯಲ್ಲಿ ವೈಯಕ್ತಿಕ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷ ರೂ.ಗೆ ವಿಸ್ತರಣೆ ಮಾಡಿ ಘೋಷಣೆ ಮಾಡಿದರು ಮಧ್ಯಮ ವರ್ಗದ ವೇತನದಾರ ವರ್ಗದವರನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರಂತೆ ಹೊಸ ತೆರಿಗೆ ವಿಧಾನದ ಅಡಿಯಲ್ಲಿ 7 ಲಕ್ಷ ರೂ. ಆದಾಯದವರೆಗೂ ಆದಾಯ ತೆರಿಗೆ ಇರುವುದಿಲ್ಲ ಎಂದು ಹೇಳಿದರು.
3ರಿಂದ 6 ಲಕ್ಷದ ರೂ.ವರೆಗಿನ ಆದಾಯಕ್ಕೆ ಶೇಕಡ 5ರಷ್ಟು ತೆರಿಗೆ ಇರಲಿದೆ. 6ರಿಂದ 9 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇಕಡ 10ರಷ್ಟು ತೆರಿಗೆ, 9ರಿಂದ 12 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇಕಡ 15ರಷ್ಟು ತೆರಿಗೆ ಹಾಗೂ 12ರಿಂದ 15 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇಕಡ 20ರಷ್ಟು ಹಾಗೂ 15 ಲಕ್ಷ ರೂ. ಮೇಲ್ಪಟ್ಟ ಆದಾಯಕ್ಕೆ ಶೇ 30ರ ತೆರಿಗೆ ಇರಲಿದೆ.
ಹೊಸ ತೆರಿಗೆ ಪದ್ಧತಿಯೇ ಇನ್ನು ಮುಂದೆ ಡಿಫಾಲ್ಟ್ ತೆರಿಗೆ ಪದ್ಧತಿ ಆಗಿರುತ್ತದೆ. ಆದರೆ ಹಳೆಯ ತೆರಿಗೆ ಪದ್ಧತಿಯೂ ಚಾಲ್ತಿಯಲ್ಲಿರುತ್ತದೆ. ತೆರಿಗೆ ಸ್ಲ್ಯಾಬ್ಗಳನ್ನು 6 ಹಂತಗಳಿಂದ 5 ಹಂತಗಳಿಗೆ ಬದಲಿಸಲಾಗಿದೆ. ಹೊಸ ತೆರಿಗೆ ಪದ್ಧತಿ ಆರಿಸಿಕೊಳ್ಳುವವರಿಗೆ 7 ಲಕ್ಷದ ರೂ.ವರೆಗಿನ ತೆರಿಗೆ ವಿನಾಯ್ತಿ ಲಭ್ಯವಾಗಲಿದೆ ಎಂದು ಬಜೆಟ್ನಲ್ಲಿ ತಿಳಿಸಲಾಗಿದೆ.