Wednesday, November 29, 2023
spot_img
- Advertisement -spot_img

Vande Bharat Express: ‘ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು’ ಸೇವೆ ಬೆಳಗಾವಿಯವರೆಗೆ ವಿಸ್ತರಣೆ, ರೈಲ್ವೆ ಸಚಿವಾಲಯ ಆದೇಶ

ನವದೆಹಲಿ: ಬೆಂಗಳೂರು-ಧಾರವಾಡ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಿ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ.

ಈ ಕುರಿತ ಆದೇಶವನ್ನು ಎಕ್ಸ್(ಟ್ವಿಟ್ಟರ್) ನಲ್ಲಿ ಹಂಚಿಕೊಂಡಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲನ್ನು ಬೆಂಗಳೂರು-ಧಾರವಾಡ ದಿಂದ ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಇಂದು ಪದಗ್ರಹಣ: ಬಿಎಸ್‌ವೈ ಹುಟ್ಟೂರಲ್ಲಿ ಮನೆ ಮಾಡಿದ ಸಂಭ್ರಮ

ರೈಲಿನ ವೇಳಾಪಟ್ಟಿ ಇಂತಿದೆ:

ಬೆಂಗಳೂರು-ಬೆಳಗಾವಿ ರೈಲು ಸಂಖ್ಯೆ (20661) ಬೆಳ್ಳಿಗೆ 05.45 ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಟು ಮಧ್ಯಾಹ್ನ 01.30 ಕ್ಕೆ ಬೆಳಗಾವಿ ತಲುಪಲಿದೆ.

ಹುಬ್ಬಳ್ಳಿ -ಧಾರವಾಡ ನಡುವೆ ಜೂನ್‌ 27ರಿಂದ ವಂದೇ ಭಾರತ್‌ ರೈಲು ಸಂಚಾರ ಪ್ರಾರಂಭಗೊಂಡಿತ್ತು. ಆದರೆ ಬೆಳಗಾವಿಯವರೆಗೆ ವಿಸ್ತರಿಸುವ ಬೇಡಿಕೆಗೆ ಸ್ಪಂದನೆ ಸಿಕ್ಕಿರಲಿಲ್ಲ. ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರ ಬೇಡಿಕೆಗೆ ಮಣಿದ ರೈಲ್ವೆ ಇಲಾಖೆ ಕೊನೆಗೂ ಬೆಳಗಾವಿಗೆ ಸಂಚಾರ ಪ್ರಾರಂಭಿಸುತ್ತಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ವಿರುದ್ಧ ಸುಳ್ಳು ಹೇಳಿಕೆ; ಪ್ರಿಯಾಂಕಾ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles