Wednesday, March 22, 2023
spot_img
- Advertisement -spot_img

ಬ್ಯಾನರ್, ಪೋಸ್ಟರ್ ತೆಗೆಯದಿದ್ರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ: ತುಷಾರ್ ಗಿರಿನಾಥ್ ಖಡಕ್ ಎಚ್ಚರಿಕೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎಲ್ಲಿ ನೋಡಿದ್ರೂ ಫ್ಲೆಕ್ಸ್ ಗಳು , ಬ್ಯಾನರ್ ಗಳು ರಾರಾಜಿಸುತ್ತಿದ್ದು, ಅರ್ಧಕ್ಕರ್ಧ ಎಲ್ಲ ಜಾಗ ಅವೇ ನುಂಗಿಕೊಳ್ಳುತ್ತವೆ ಜೊತೆಗೆ ಜನರಿಗೆ ಸಂಚಾರಕ್ಕೆ ಅಡ್ಡಿ ಮಾಡುತ್ತಿದೆ. ಈ ಹಿನ್ನೆಲೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬ್ಯಾನರ್ ತೆಗೆಯಿರಿ, ಇಲ್ಲವೇ ಕ್ರಿಮಿನಲ್ ಕೇಸ್ ಎದುರಿಸಿ ಎಂದು ಖಡಕ್ಕಾಗಿಯೇ ಹೇಳಿದ್ದಾರೆ. ಈ ವಾರಾಂತ್ಯದ ವೇಳೆಗೆ ಕನಿಷ್ಟ 10 ಎಫ್ಐಆರ್ ದಾಖಲಿಸುವಂತೆ ಪ್ರತಿ ವಲಯದ ಸಹಾಯಕ ಆಯುಕ್ತರು ಮತ್ತು ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು ಮತ್ತು ಅವರ ಬೆಂಬಲಿಗರು ಈಗಾಗಲೇ ಬ್ಯಾನರ್‌ಗಳಿಂದ ನಗರವನ್ನು ವಿರೂಪಗೊಳಿಸಿರುವ ಹಿನ್ನೆಲೆಯಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ. ಅಕ್ರಮ ಬ್ಯಾನರ್ ಮತ್ತು ಪೋಸ್ಟರ್ ಗಳಿಗೆ ಸಂಬಂಧಿಸಿದಂತೆ ವಲಯವಾರು ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರು ಆಯಾ ವಲಯದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗೋವಿಂದರಾಜನಗರ ಹಾಗೂ ಮಲ್ಲೇಶ್ವರಂನಲ್ಲಿ ಸಚಿವ ವಿ. ಸೋಮಣ್ಣ ಹಾಗೂ ಸಚಿವ ಅಶ್ವತ್ಥನಾರಾಯಣ್ ಅವರಿಗೆ ಶುಭಾಶಯ ಕೋರುವ ಬ್ಯಾನರ್‌ಗಳು ಕಣ್ಣಿಗೆ ರಾರಾಜಿಸುತ್ತಿವೆ. ಈ ಬಗ್ಗೆ ಸ್ಥಳೀಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೆ.

ಅದರಂತೆ ತ್ವರಿತವಾಗಿ ಬ್ಯಾನರ್ ಗಳನ್ನು ತೆಗೆಯುತ್ತಿದ್ದಾರೆ. ಆದರೆ, ಅದರಿಂದ ಅಷ್ಟು ಪರಿಣಾಮವಾಗುತ್ತಿಲ್ಲ ಎಂಬುದು ನಮಗೆ ತಿಳಿದಿದೆ. ಹೀಗಾಗಿ ವಲಯವಾರು ಕನಿಷ್ಠ 10 ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

Related Articles

- Advertisement -

Latest Articles